Wednesday, July 6, 2022
Home ಮನರಂಜನೆ ತೆಂಕುತಿಟ್ಟು ಯಕ್ಷಗಾನ ನಾಟ್ಯ ತರಬೇತಿ

ತೆಂಕುತಿಟ್ಟು ಯಕ್ಷಗಾನ ನಾಟ್ಯ ತರಬೇತಿ

ಉಡುಪಿ: ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನ ಆಶ್ರಯದಲ್ಲಿ ಇಲ್ಲಿನ ಸೋದೆ ಮಠದಲ್ಲಿ ತೆಂಕುತಿಟ್ಟು ಯಕ್ಷಗಾನ ನಾಟ್ಯ (ಹೆಜ್ಜೆಗಾರಿಕೆ) ಉಚಿತ ತರಬೇತಿ ಈ ತಿಂಗಳ 20ರಿಂದ ಆರಂಭಗೊಳ್ಳಲಿದೆ.

ಕಳೆದ 4 ವರ್ಷದಿಂದ ಯಕ್ಷಗುರು ರಾಕೇಶ್ ರೈ ಅಡ್ಕ ಮೂಲಕ ಸುಮಾರು 80ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗಿದೆ.

ಪ್ರತೀ ಮಂಗಳವಾರ ಸಂಜೆ 5ರಿಂದ 6ರ ವರೆಗೆ ತರಗತಿ ನಡೆಯಲಿದ್ದು, ವಯಸ್ಸಿನ ಮಿತಿಯಿಲ್ಲದೆ ಆಸಕ್ತರು ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ 9844212104 ಅಥವಾ 9663424981 ಅಥವಾ 9845150802ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!