Friday, January 28, 2022
Home ಮನರಂಜನೆ ಚಿಟ್ಟಾಣಿ ಯಕ್ಷಗಾನ ಸಪ್ತಾಹ ಆರಂಭ

ಚಿಟ್ಟಾಣಿ ಯಕ್ಷಗಾನ ಸಪ್ತಾಹ ಆರಂಭ

ಚಿಟ್ಟಾಣಿ ಯಕ್ಷಗಾನ ಸಪ್ತಾಹ ಆರಂಭ

ಉಡುಪಿ, ನ. 28 (ಸುದ್ದಿಕಿರಣ ವರದಿ): ಪರ್ಯಾಯ ಅದಮಾರು ಶ್ರೀಕೃಷ್ಣ ಮಠ ಆಶ್ರಯದಲ್ಲಿ ಚಿಟ್ಟಾಣಿ ಅಭಿಮಾನಿ ಬಳಗ ಉಡುಪಿ ನೇತೃತ್ವದಲ್ಲಿ ಡಿ. 4ರ ವರೆಗೆ ರಾಜಾಂಗಣದಲ್ಲಿ ನಡೆಯುವ ಚಿಟ್ಟಾಣಿ ಯಕ್ಷಗಾನ ಸಪ್ತಾಹವನ್ನು ಭಾನುವಾರ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಮತ್ತು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಉಡುಪಿ ಶಾಸಕ ಕೆ. ರಘುಪತಿ ಭಟ್, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಕಲಾಪೋಷಕ ಡಾ| ಚಂದ್ರಶೇಖರ ದಾಮ್ಲೆ, ಉಡುಪಿ ವಿಶ್ವ ಸಂಸ್ಕೃತಿ ಪ್ರತಿಷ್ಠಾನ ಗೌರವಾಧ್ಯಕ್ಷ ಯು. ವಿಶ್ವನಾಥ ಶೆಣೈ, ಯಕ್ಷಗಾನ ಕಲಾರಂಗ ಅಧ್ಯಕ್ಷ ಎಂ. ಗಂಗಾಧರ ರಾವ್, ಜೊತೆ ಕಾರ್ಯದರ್ಶಿ ನಾರಾಯಣ ಎಂ. ಹೆಗಡೆ, ಕೋಶಾಧಿಕಾರಿ ಮನೋಹರ ಕೆ., ಸುಬ್ರಹ್ಮಣ್ಯ ಚಿಟ್ಟಾಣಿ ಇದ್ದರು.
ಕಲಾರಂಗ ಕಾರ್ಯದರ್ಶಿ ಮುರಲಿ ಕಡೆಕಾರ್ ನಿರೂಪಿಸಿದರು

ಬಳಿಕ ವೀರಾಂಜನೇಯ ಯಕ್ಷಮಿತ್ರ ಮಂಡಳಿ ಮತ್ತು ಅತಿಥಿ ಕಲಾವಿದರ ಸಹಯೋಗದೊಂದಿಗೆ ಸತ್ಯ ಹರಿಶ್ಚಂದ್ರ ಯಕ್ಷಗಾನ ಪ್ರದರ್ಶನ ನಡೆಯಿತು.

 

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!