Friday, January 28, 2022
Home ಸಮಾಚಾರ ಜಿಲ್ಲಾ ಸುದ್ದಿ ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ

ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ

ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ

ಉಡುಪಿ, ನ. 28 (ಸುದ್ದಿಕಿರಣ ವರದಿ): ಶ್ರೀಕೃಷ್ಣ ಮಠ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ ಭಾನುವಾರ ಪರ್ಯಾಯ ಅದಮಾರು ಶ್ರೀಕೃಷ್ಣ ಮಠದ ಆಶ್ರಯದಲ್ಲಿ ಯಕ್ಷಗಾನ ಕಲಾರಂಗ ಸಹಯೋಗದೊಂದಿಗೆ ಶ್ರೀ ವಿಶ್ವೇಶತೀರ್ಥ ಪ್ರಶಸ್ತಿ ಸಹಿತ 18 ಮಂದಿ ಕಲಾವಿದರಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಿದರು.

50 ಸಾವಿರ ರೂ. ನಗದು ಹೊಂದಿರುವ ಶ್ರೀ ವಿಶ್ವೇಶತೀರ್ಥ ಪ್ರಶಸ್ತಿಯನ್ನು ಮೂಡುಬಿದಿರೆ ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರಕ್ಕೆ ನೀಡಲಾಯಿತು. ಡಾ. ಮೋಹನ ಆಳ್ವ ಪ್ರಶಸ್ತಿ ಸ್ವೀಕರಿಸಿದರು.

ಗಣ್ಯವ್ಯಕ್ತಿಗಳ ಸ್ಮರಣಾರ್ಥ ಸ್ಥಾಪಿಸಲಾದ ತಲಾ 20 ಸಾವಿರ ರೂ. ಮೊತ್ತ ಸಹಿತ ಯಕ್ಷಗಾನ ಕಲಾರಂಗ ಪ್ರಶಸ್ತಿಯನ್ನು ಯಕ್ಷಗಾನದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಹಾಗೂ ಸಂಸ್ಥೆಯ ಕೋಶಾಧಿಕಾರಿ ಮನೋಹರ ಕೆ. ಅವರಿಗೆ ಯಕ್ಷಚೇತನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ಕಳೆದ 4 ತಿಂಗಳ ಹಿಂದೆ ಆಕಸ್ಮಿಕವಾಗಿ ನಿಧನ ಹೊಂದಿದ ಯುವ ಕಲಾವಿದ ಗೋಪಾಲ ಗೌಡ ಕುಮಟಾ ಅವರ ಪತ್ನಿ ರಾಧಾಗೌಡ ಅವರಿಗೆ 50 ಸಾವಿರ ಮೊತ್ತದ ನೆರವನ್ನು ಸಂಸ್ಥೆ ವತಿಯಿಂದ ನೀಡಲಾಯಿತು.

ಪ್ರಶಸ್ತಿ ಪ್ರದಾನ ಮಾಡಿದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ನಮ್ಮ ನಿತ್ಯದ ಕೆಲಸವನ್ನೇ ದೇವರ ಪೂಜೆ ಎಂದು ಭಾವಿಸಿ ಮಾಡಬೇಕು’ ಮತ್ತು ಉತ್ತಮ ಕೆಲಸ ಮಾಡುತ್ತಿರುವ ಕಲಾರಂಗ ಗುರುಗಳಾದ ಶ್ರೀ ವಿಶ್ವೇಶತೀರ್ಥರಿಗೆ ಅತ್ಯಂತ ಪ್ರಿಯವಾದ ಈ ಕೆಲಸ ಅವರಿಗೆ ನಾವು ಕೊಡುವ ಗೌರವ ಎಂದರು.

ಶಾಸಕ ಕೆ. ರಘುಪತಿ ಭಟ್, ಕಲಾಪೋಷಕ ಡಾ| ಚಂದ್ರಶೇಖರ ದಾಮ್ಲೆ, ಕಲಾರಂಗ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಳಿ ಕಡೆಕಾರ್, ಜೊತೆ ಕಾರ್ಯದರ್ಶಿ ನಾರಾಯಣ ಹೆಗಡೆ, ಉಪಾಧ್ಯಕ್ಷರಾದ ಎಸ್. ವಿ. ಭಟ್, ಗಣೇಶ್ ರಾವ್ ಮೊದಲಾದವರಿದ್ದರು.

ಬಳಿಕ ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರ ವಿದ್ಯಾರ್ಥಿಗಳಿಂದ ಸಾಯುಜ್ಯ ಸಂಗ್ರಾಮ ಪ್ರಸಂಗದ ತೆಂಕುತಿಟ್ಟು ಯಕ್ಷಗಾನ ನಡೆಯಿತು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!