Tuesday, May 17, 2022
Home ಸಮಾಚಾರ ಜಿಲ್ಲಾ ಸುದ್ದಿ ಯಕ್ಷಗಾನ ಪ್ರಶಸ್ತಿಗೆ ಆಯ್ಕೆ

ಯಕ್ಷಗಾನ ಪ್ರಶಸ್ತಿಗೆ ಆಯ್ಕೆ

ಯಕ್ಷಗಾನ ಪ್ರಶಸ್ತಿಗೆ ಆಯ್ಕೆ

ಉಡುಪಿ, ನ. 29 (ಸುದ್ದಿಕಿರಣ ವರದಿ): ಇಲ್ಲಿನ ಚಿಟ್ಟಾಣಿ ಅಭಿಮಾನಿ ಬಳಗ ನೀಡುವ ಯಕ್ಷಗಾನ ಪ್ರಶಸ್ತಿಗೆ ಇಬ್ಬರು ಕಲಾವಿದರು ಆಯ್ಕೆಯಾಗಿದ್ದಾರೆ.

ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿಗೆ ಹಿರಿಯ ಕಲಾವಿದ ಆರ್ಗೋಡು ಮೋಹನದಾಸ ಶೆಣೈ ಮತ್ತು ಟಿ. ವಿ. ರಾವ್ ಪ್ರಶಸ್ತಿಗೆ ಹವ್ಯಾಸಿ ಕಲಾವಿದೆ ಮೂಕಾಂಬಿಕಾ ವಾರಂಬಳ್ಳಿ ಆಯ್ಕೆಯಾಗಿದ್ದಾರೆ.

ಡಿ. 4ರಂದು ಕೃಷ್ಣಮಠ ರಾಜಾಂಗಣದಲ್ಲಿ ನಡೆಯುವ ಚಿಟ್ಟಾಣಿ ಯಕ್ಷಗಾನ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಭಿಮಾನಿ ಬಳಗ ಅಧ್ಯಕ್ಷ ಡಾ| ತಲ್ಲೂರು ಶಿವರಾಮ ಶೆಟ್ಟಿ ಮತ್ತು ಕಾರ್ಯದರ್ಶಿ ಎಂ. ಗೋಪಿಕೃಷ್ಣ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!