Friday, January 28, 2022
Home ಮನರಂಜನೆ ಕಲಾರಂಗ ಪ್ರಶಸ್ತಿ ಪ್ರದಾನ

ಕಲಾರಂಗ ಪ್ರಶಸ್ತಿ ಪ್ರದಾನ

ಕಲಾರಂಗ ಪ್ರಶಸ್ತಿ ಪ್ರದಾನ
(ಸುದ್ದಿಕಿರಣ ವರದಿ)

ಉಡುಪಿ: ಪರ್ಯಾಯ ಅದಮಾರು ಶ್ರೀಕೃಷ್ಣ ಮಠ ಆಶ್ರಯದಲ್ಲಿ ರಾಜಾಂಗಣದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾರಂಗ ಆಯೋಜಿಸಿರುವ ಯಕ್ಷಗಾನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಖ್ಯಾತ ಅರ್ಥಧಾರಿಗಳಾದ ಕರ್ಗಲ್ಲು ವಿಶ್ವೇಶ ಭಟ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ, ವಾಸುದೇವ ರಾವ್ ಸುರತ್ಕಲ್ ಅವರಿಗೆ ಮಟ್ಟಿ ಮುರಳೀಧರ ರಾವ್ ಪ್ರಶಸ್ತಿ ಮತ್ತು ವಿದ್ವಾನ್ ಉಮಾಕಾಂತ ಭಟ್ ಕೆರೇಕೈ ಅವರಿಗೆ ಪೆರ್ಲ ಪಂಡಿತ ಕೃಷ್ಣ ಭಟ್ ಪ್ರಶಸ್ತಿ ಪ್ರದಾನ ಮಾಡಿದರು.

 

ತಲ್ಲೂರು ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಡಾ| ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಕೊಲ್ಲೂರು ದೇವಳ ಮಾಜಿ ಆಡಳಿತ ಮೊಕ್ತೇಸರ ಕೃಷ್ಣಪ್ರಸಾದ ಅಡ್ಯಂತಾಯ ಅತಿಥಿಗಳಾಗಿದ್ದರು.

ಪಾಠದಲ್ಲಿ ಯಕ್ಷಗಾನ ಅಳವಡಿಕೆ
ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿ.ವಿ. ಕುಲಪತಿ ಪ್ರೊ. ಪಿ. ಎಸ್. ಯಡಪಡಿತ್ತಾಯ, ಯಕ್ಷಗಾನ ಕಲೆಯೂ ಪ್ರಸ್ತುತ ಹೊಸ ಆಯಾಮವಾಗಿ ಮಾರ್ಪಾಡಾಗುತ್ತಿದ್ದು, ಅದು ಶೈಕ್ಷಣಿಕವಾಗಿ ಕಲಿಕೆಯ ಒಂದು ಪಾಠವಾಗಿ ಅಳವಡಿಕೆಯಾಗಬೇಕು. ಅದಕ್ಕಾಗಿ ಯಕ್ಷಗಾನ ಕ್ಷೇತ್ರದ ವಿದ್ವಾಂಸರು, ಸಂಘಟನೆ ಶ್ರಮಿಸಬೇಕು ಎಂದರು.

ಯಕ್ಷಗಾನ ಕ್ಷೇತ್ರಕ್ಕೆ ಸಂಬಂಧಿಸಿ ಶೈಕ್ಷಣಿಕವಾಗಿ ಅಧ್ಯಯನ, ಸಂಶೋಧನೆ, ಪ್ರಕಟಣೆ ಇತ್ಯಾದಿಗಳಿಗೆ ಮಂಗಳೂರು ವಿ.ವಿ. ಸದಾ ಪ್ರೋತ್ಸಾಹ ನೀಡುತ್ತದೆ ಎಂದರು.ಯಕ್ಷಗಾನ ಕಲಾರಂಗ ಅಧ್ಯಕ್ಷ ಗಂಗಾಧರ ರಾವ್, ಉಪಾಧ್ಯಕ್ಷರಾದ ಎಸ್. ವಿ. ಭಟ್ ಮತ್ತು ಪಳ್ಳಿ ಕಿಶನ್ ಹೆಗ್ಡೆ, ಕಾರ್ಯದರ್ಶಿ ಮುರಳಿ ಕಡೆಕಾರ್, ಜೊತೆ ಕಾರ್ಯದರ್ಶಿ ನಾರಾಯಣ ಎಂ. ಹೆಗಡೆ ಮೊದಲಾದವರಿದ್ದರು.

ಅದಕ್ಕೂ ಮುನ್ನ ಕರ್ಗಲ್ಲು ವಿಶ್ವೇಶ ಭಟ್ ನಾಟ್ಯ ಪ್ರಾತ್ಯಕ್ಷಿಕೆ ಹಾಗೂ ವಿದ್ವಾನ್ ಉಮಾಕಾಂತ ಭಟ್ ಕೆರೇಕೈ ಮತ್ತು ವಾಸುದೇವ ರಾವ್ ಸುರತ್ಕಲ್ ಅವರಿಂದ ಕನಸು ಕಂಡ ಕಂಸ ತಾಳಮದ್ದಳೆ ನಡೆಯಿತು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!