ಆದಿವಾಸಿ ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಸ್ವರ್ಣಾರ್ಥವಾಗಿ ಜನಜಾತಿ ಗೌರವ ದಿವಸ್ ಆಚರಣೆ

ಆದಿವಾಸಿ ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಸ್ವರ್ಣಾರ್ಥವಾಗಿ ಜನಜಾತಿ ಗೌರವ ದಿವಸ್ ಆಚರಣೆ

Posted  36 Views updated 13 days ago

ಕೋಲಾರ

ಕೋಲಾರ: ದಲಿತರ ಅಭಿವೃದ್ಧಿಗಾಗಿ ರಾಷ್ಟ್ರೀಯ ಪರಿಶಿಷ್ಟ ಜಾತಿ ಪಂಗಡಗಳ ಒಕ್ಕೂಟದಿಂದ ಸಿಗುವ ಸಾಲ ಸೌಲಭ್ಯಗಳನ್ನು ಬಳಸಿಕೊಂಡು ಅರ್ಥಿಕವಾಗಿ ಮುಂದೆ ಬರಬೇಕಾಗಿದೆ ಎಂದು ಎಸ್ಸಿ ಎಸ್ಟಿ ಹಬ್ ರಾಜ್ಯ ನಿರ್ದೇಶಕಿ ಎ.ಕೋಕಿಲಾ ತಿಳಿಸಿದರು. ನಗರದ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಡಿಐಸಿಸಿಐ ವತಿಯಿಂದ ಶುಕ್ರವಾರ ಆದಿವಾಸಿ ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಸ್ವರ್ಣಾರ್ಥವಾಗಿ ಜನಜಾತಿ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೇಂದ್ರ ಮತ್ತು ರಾಜ್ಯ ಸರಕಾರಗಳು ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ವಿಶೇಷ ಯೋಜನೆಗಳನ್ನು ಜಾರಿಗೆ ತರಲಾಗಿದೆ ಈ ಯೋಜನೆಗಳ ಸದುಪಯೋಗವನ್ನು ಪ್ರತಿಯೊಬ್ಬರೂ ಬಳಸಿಕೊಳ್ಳಬೇಕು ಜೊತೆಗೆ ಯೋಜನೆಗಳ ಕುರಿತಂತೆಯ ಮಾಹಿತಿಯನ್ನು ಪ್ರತಿಯೊಬ್ಬರಿಗೂ ತಿಳಿಸುವ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕಾಗಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಪಿ.ನಾಗೇಶ್ ಮಾತನಾಡಿ ಪರಿಶಿಷ್ಟ ಪಂಗಡದಲ್ಲಿ ಬಹುಸಂಖ್ಯಾತ ವಿದ್ಯಾವಂತ ಯುವಕರು ತಮ್ಮ ಪ್ರತಿಭೆ ಮತ್ತು ಸಾಮರ್ಥ್ಯ ಬಳಸಿಕೊಂಡು ಆರ್ಥಿಕ ಸ್ವಾವಲಂಬನೆ ರೂಡಢಿಸಿಕೊಳ್ಳಬೇಕು. ಆ ಮೂಲಕ ಸ್ವಾಭಿಮಾನದ ಬದುಕನ್ನು ತಮ್ಮದಾಗಿಸಿಕೊಂಡು ಉದ್ಯಮಶೀಲತೆಯಲ್ಲಿ ಲಭ್ಯವಿರುವ ಸವಲತ್ತುಗಳನ್ನು ಬಳಕೆ ಮಾಡಿಕೊಂಡು ಮುಂದೆ ಬರಬೇಕು ಉದ್ಯಮದಲ್ಲಿ ನಿಮ್ಮ ಉದ್ಯೋಗದೊಂದಿಗೆ ಬೇರೆಯವರಿಗೆ ಉದ್ಯೋಗ ಕೊಡಿಸುವ ಕೆಲಸವಾಗಲಿ ಎಂದರು. ಈ ಸಂದರ್ಭದಲ್ಲಿ ಮಂಜುನಾಥ ಹೆಲ್ತ್ ಕೇರ್ ನ ಮುಖ್ಯಸ್ಥ ಡಾ. ನಾರಾಯಣಸ್ವಾಮಿ, ವಾಲ್ಮೀಕಿ ನಾಯಕ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಲೂರು ಎನ್ ವೆಂಕಟರಾಮ್ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಹಿರಿಯ ದಲಿತ ಮುಖಂಡ ಬೆಳಗಾನಹಳ್ಳಿ ಮುನಿವೆಂಕಟಪ್ಪ, ಎಸ್ಸಿ ಎಸ್ಟಿ ಹಬ್ ನ ಸುಬ್ರಮಣಿ, ಗೀತಾ ಮತ್ತು ಡಿಐಸಿಸಿಐ ಸಂಸ್ಥೆಯ ಜಿಲ್ಲಾ ಸಂಚಾಲಕ ನಂಬಿಗಾನಹಳ್ಳಿ ನಾರಾಯಣಸ್ವಾಮಿ ಮುಂತಾದವರು ಇದ್ದರು.

Image

ಸುದ್ದಿ ಕಿರಣ ಟಿವಿ ಬಾಳಿನ ಬೆಳಕು

ನಮ್ಮ ಈ ವರದಿಯ ಲಿಂಕ್ ನ್ನು ಒಪನ್ ಮಾಡಿ, ಲೈಕ್ ಮಾಡಿ suddikirana.com SUBSCRIBE ಮಾಡಿ ಬೆಲ್ ಬಟನ್ ಒತ್ತೋದನ್ನು ಮಾತ್ರ ಮರಿಬೇಡಿ ಜೊತೆಗೆ ಇನ್ನಷ್ಟು ಮಂದಿಗೆ ಶೇರ್ ಮಾಡಿ ಸುದ್ದಿ ಮತ್ತು ಜಾಹೀರಾತುಗಳುಗಾಗಿ ಸಂಪರ್ಕಿಸಿ :96866 65456


Your reaction?

0
LOL
0
LOVED
0
PURE
0
AW
0
FUNNY
0
BAD!
0
EEW
0
OMG!
0
ANGRY
0 Comments

  • ಆದಿವಾಸಿ ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಸ್ವರ್ಣಾರ್ಥವಾಗಿ ಜನಜಾತಿ ಗೌರವ ದಿವಸ್ ಆಚರಣೆ
  • admin