ನಂದವಾಡಗಿ ಗ್ರಾಮ ಪಂಚಾಯತ ಮಟ್ಟದ ಶಾಲಾ ಮಕ್ಕಳ ಗಣಿತ ಸ್ಪರ್ಧೆ ಕಾರ್ಯಕ್ರಮ

ನಂದವಾಡಗಿ ಗ್ರಾಮ ಪಂಚಾಯತ ಮಟ್ಟದ ಶಾಲಾ ಮಕ್ಕಳ ಗಣಿತ ಸ್ಪರ್ಧೆ ಕಾರ್ಯಕ್ರಮ

Posted  38 Views updated 13 days ago

ನಂದವಾಡಗಿ

ನಂದವಾಡಗಿ : ಇಳಕಲ್ ತಾಲೂಕಿನ ನಂದವಾಡಗಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮುದಾಯ ಹಾಗೂ ಅಕ್ಷರ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಪಂಚಾಯತ ಮಟ್ಟದ ಶಾಲಾ ಮಕ್ಕಳ ಗಣಿತ ಸ್ಪರ್ಧೆ ಕಾರ್ಯಕ್ರಮವನ್ನು ಕೇಂದ್ರ ಶಾಲೆ ಸ ಹೆ ಮ ಹಿ ಪ್ರಾ ಶಾಲೆ ನಂದವಾಡಗಿಯಲ್ಲಿ ಜರುಗಿತು. ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು,ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸಮೂಹ ಸಂಪನ್ಮೂಲ ವ್ಯಕ್ತಿ, ಶಾಲಾ ಮುಖ್ಯ ಗುರುಮಾತೆ, ಶಿಕ್ಷಕರು, ಪರೀಕ್ಷಾ ನೋಡಲ್, ನಂದವಾಡಗಿ ಕ್ಲಸ್ಟರ್ ಎಲ್ಲಾ ಶಾಲೆಯ ಮುಖ್ಯ ಗುರುಗಳು, ಶಿಕ್ಷಕರು,ಸಮುದಾಯದ ಭಾಗೀತ್ವದಲ್ಲಿ ಗಣಿತ ಸ್ಪರ್ಧೆಯ ಪ್ರಶ್ನೆ ಪತ್ರಿಕೆ ಬಂಡಲನ್ನು ತೆರೆಯುವುದರ ಮೂಲಕ ಉದ್ಘಾಟನೆ ಮಾಡಲಾಯಿತು.ನಂತರ ನಾಲ್ಕು, ಐದು, ಆರನೇ ತರಗತಿಯ ಮಕ್ಕಳಿಗೆ ಬಿಳಿ, ಗುಲಾಬಿ, ಹಳದಿ ಬಣ್ಣದ ಪ್ರಶ್ನೆ ಪತ್ರಿಕೆ ನೀಡಿ ಪರೀಕ್ಷೆ ನಡೆಸಲಾಯಿತು. ಸ್ವಯಂ ಸೇವಕರು ಪರೀಕ್ಷೆ ನಡೆಸಿ, ಮೌಲ್ಯಮಾಪನ ಮಾಡಿ ವರ್ಗವಾರು ಪ್ರಥಮ, ದ್ವಿತೀಯ, ತೃತೀಯ ಸ್ಥಾನವನ್ನು ಆಯ್ಕೆ ಮಾಡಲಾಯಿತು. ನಂತರ ವಿಜೇತ ಮಕ್ಕಳಿಗೆ ಪ್ರಶಸ್ತಿ ಹಾಗೂ ಪದಕವನ್ನು ನೀಡಿ ಗೌರವಿಸಲಾಯಿತು. ಒಟ್ಟಾರೆ ಮಕ್ಕಳು ಈ ಒಂದು ಗಣಿತ ಸ್ಪರ್ಧೆ ಕಾರ್ಯಕ್ರಮದಲ್ಲಿ ಅತ್ಯುತ್ತಮವಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಿದ ಸರ್ವರಿಗೂ ಪರೀಕ್ಷಾ ನೋಡಲ್ ಅಭಿನಂದನೆಗಳು ಹಾಗೂ ಧನ್ಯವಾದಗಳನ್ನು ಸಲ್ಲಿಸಿದರು.

Image

ಸುದ್ದಿ ಕಿರಣ ಟಿವಿ ಬಾಳಿನ ಬೆಳಕು

ನಮ್ಮ ಈ ವರದಿಯ ಲಿಂಕ್ ನ್ನು ಒಪನ್ ಮಾಡಿ, ಲೈಕ್ ಮಾಡಿ suddikirana.com SUBSCRIBE ಮಾಡಿ ಬೆಲ್ ಬಟನ್ ಒತ್ತೋದನ್ನು ಮಾತ್ರ ಮರಿಬೇಡಿ ಜೊತೆಗೆ ಇನ್ನಷ್ಟು ಮಂದಿಗೆ ಶೇರ್ ಮಾಡಿ ಸುದ್ದಿ ಮತ್ತು ಜಾಹೀರಾತುಗಳುಗಾಗಿ ಸಂಪರ್ಕಿಸಿ :96866 65456

#SUDDIKIRANA #SUDDIKIRANATV #SUDDIKIRANAKANNADADAILY


Your reaction?

0
LOL
0
LOVED
0
PURE
0
AW
0
FUNNY
0
BAD!
0
EEW
0
OMG!
0
ANGRY
0 Comments

  • ನಂದವಾಡಗಿ ಗ್ರಾಮ ಪಂಚಾಯತ ಮಟ್ಟದ ಶಾಲಾ ಮಕ್ಕಳ ಗಣಿತ ಸ್ಪರ್ಧೆ ಕಾರ್ಯಕ್ರಮ
  • admin