Monday, July 4, 2022
Home ಸಮಾಚಾರ ರಾಜ್ಯ ವಾರ್ತೆ ಅಂಗಾಂಗ ದಾನ: ಸಾರ್ವಜನಿಕರಿಗೆ ಸಿಎಂ ಕರೆ

ಅಂಗಾಂಗ ದಾನ: ಸಾರ್ವಜನಿಕರಿಗೆ ಸಿಎಂ ಕರೆ

ಅಂಗಾಂಗ ದಾನ: ಸಾರ್ವಜನಿಕರಿಗೆ ಸಿಎಂ ಕರೆ

(ಸುದ್ದಿಕಿರಣ ವರದಿ)
ಉಡುಪಿ: ಪ್ರತಿಯೊಬ್ಬರೂ ಅಂಗಾಂಗ ದಾನಕ್ಕೆ ಮುಂದೆಬರುವಂತೆ, ಆ ಮೂಲಕ ಇನ್ನೊಬ್ಬರ ಜೀವ ಉಳಿಸುವ ಪವಿತ್ರ ಕಾರ್ಯಕ್ಕೆ ಮುಂದಾಗುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ.

ಶುಕ್ರವಾರ ಉಡುಪಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಇಂದು ವಿಶ್ವ ಅಂಗಾಂಗ ದಾನ ದಿನಾಚರಣೆ ಮಾಡಲಾಗುತ್ತಿದೆ. ಈಚೆಗೆ ಅಂಗಾಂಗ ಕಸಿ ಮಾಡುವ ತಂತ್ರಜ್ಞಾನ ಬಂದಿದೆ. ಅದರಿಂದ ಬಹಳಷ್ಟು ಜೀವಗಳನ್ನು ಉಳಿಸಬಹುದು. ಇಂಥ ಸಂದರ್ಭದಲ್ಲಿ ಹೆಚ್ಚಿನ ಜನ ಅಂಗಾಂಗ ದಾನಕ್ಕೆ ಮುಂದೆ ಬಂದಲ್ಲಿ ಸಾವಿರಾರು ಜೀವಗಳನ್ನು ಉಳಿಸಲು ಸಾಧ್ಯವಿದೆ.

ನಾನು ಕೂಡ ಅಂಗಾಂಗ ದಾನಕ್ಕೆ ಸ್ವತಃ ಸಹಿ ಹಾಕುವುದರೊಂದಿಗೆ ಎಲ್ಲರಿಗೂ ಕೂಡ ಕರೆ ನೀಡುತ್ತಿದ್ದೇನೆ. ಆ ಮೂಲಕ ಮಣ್ಣಲ್ಲಿ ಮಣ್ಣಾಗುವ ಬದಲು ಇನ್ನೊಂದು ಜೀವ ಉಳಿಸಲು ಸಹಕಾರಿಯಾಗೋಣ ಎಂದರು.

ಶಾಲೆ ಆರಂಭದ ಚಿಂತನೆ ನಡುವೆ ಮಕ್ಕಳಿಗೆ ಹೆಚ್ಚು ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೂಡಲೇ ತಜ್ಞರ ಸಮಿತಿ ಸಭೆ ಕರೆದು ನಿರ್ಧಾರ ಕೈಗೊಳ್ಳಲಾಗುವುದು ಎಂದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!