Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಮೋದಿ ರಾಜತಾಂತ್ರಿಕ ನಿಲುವಿನಿಂದ ಯೋಗಕ್ಕೆ ಅಂತಾರಾಷ್ಟ್ರೀಯ ಮಾನ್ಯತೆ

ಮೋದಿ ರಾಜತಾಂತ್ರಿಕ ನಿಲುವಿನಿಂದ ಯೋಗಕ್ಕೆ ಅಂತಾರಾಷ್ಟ್ರೀಯ ಮಾನ್ಯತೆ

ಉಡುಪಿ: ಯೋಗಾಭ್ಯಾಸ ನಮ್ಮ ಭವ್ಯ ಪರಂಪರೆಯ ಸಂಕೇತ. ಪ್ರಧಾನಿ ಮೋದಿ ರಾಜತಾಂತ್ರಿಕ ನಿಲುವಿನಿಂದ ಯೋಗಾಭ್ಯಾಸ ಇಂದು ಅಂತಾರಾಷ್ಟ್ರೀಯ ಮಾನ್ಯತೆ ಪಡೆದಿದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು.

ವಿಶ್ವ ಯೋಗ ದಿನಾಚರಣೆಂ ಪ್ರಯುಕ್ತ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಂಬಲಪಾಡಿ ಹೋಟೆಲ್ ಕಾರ್ತಿಕ್ ಎಸ್ಟೇಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಸಾಮೂಹಿಕ ಯೋಗ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಯೋಗದಿಂದ ಉತ್ತಮ ಆರೋಗ್ಯ ಹಾಗೂ ಮಾನಸಿಕ ಸ್ಥಿಮಿತ ಕಾಯ್ದುಕೊಳ್ಳಲು ಸಾಧ್ಯ. ಇಂದಿನ ದಿನಗಳಲ್ಲಿ ವಿಶ್ವದಾದ್ಯಂತ ಪ್ರತಿಯೊಬ್ಬರೂ ಯೋಗಾಭ್ಯಾಸದ ಕಡೆ ಆಕರ್ಷಿತರಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದರು.

ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉಪಾಧ್ಯಕ್ಷ ಯಶಪಾಲ್ ಸುವರ್ಣ, ಪ್ರಧಾನ ಕಾರ್ಯದರ್ಶಿ ಮನೋಹರ್ ಕಲ್ಮಾಡಿ, ಕೋಶಾಧಿಕಾರಿ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಪ್ರಧಾನ ಕಾರ್ಯದರ್ಶಿ ಮಂಜುನಾಥ ಮಣಿಪಾಲ್, ರಾಜ್ಯ ವೈದ್ಯಕೀಯ ಪ್ರಕೋಷ್ಠ ಪದಾಧಿಕಾರಿ ಡಾ. ವಿಜಯೇಂದ್ರ, ಯೋಗ ಶಿಕ್ಷಕಿ ಡಾ. ಮಂಜರಿ ಚಂದ್ರ ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!