Monday, July 4, 2022
Home ಸಮಾಚಾರ ರಾಜ್ಯ ವಾರ್ತೆ ಅತ್ಯುತ್ತಮ ಮೀನು ಮಾರಾಟ ಮಹಾಮಂಡಲ ಪ್ರಶಸ್ತಿ ಪ್ರದಾನ

ಅತ್ಯುತ್ತಮ ಮೀನು ಮಾರಾಟ ಮಹಾಮಂಡಲ ಪ್ರಶಸ್ತಿ ಪ್ರದಾನ

ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಗೆ ರಾಜ್ಯದ ಅತ್ಯುತ್ತಮ ಸಹಕಾರಿ ಮೀನು ಮಾರಾಟ ಮಹಾಮಂಡಲ ಪ್ರಶಸ್ತಿ ಲಭಿಸಿದೆ.
ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಇಂದಿಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು, ಮೀನುಗಾರಿಕೆ ಸಹಕಾರಿ ಕ್ಷೇತ್ರದಲ್ಲಿನ ಶ್ರೇಷ್ಠ ಸೇವೆಯನ್ನು ಪರಿಗಣಿಸಿ ಮೀನುಗಾರಿಕೆ ಇಲಾಖೆ ನೀಡುವ ಅತ್ಯುತ್ತಮ ಮೀನುಗಾರರ ಸಹಕಾರಿ ಮಹಾಮಂಡಲ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣ ಅವರಿಗೆ ಪ್ರದಾನ ಮಾಡಿದರು.
ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಕೆ. ರಘುಪತಿ ಭಟ್, ಸೊರಬ ಶಾಸಕ ಕುಮಾರ ಬಂಗಾರಪ್ಪ ಹಾಗೂ ಮೀನುಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!