Saturday, July 2, 2022
Home ಸಮಾಚಾರ ರಾಜ್ಯ ವಾರ್ತೆ ಅನ್ಯ ಮತೀಯ ಪ್ರಾರ್ಥನಾ ಮಂದಿರಗಳಿಗೆ ಅನುದಾನ ತಡೆ

ಅನ್ಯ ಮತೀಯ ಪ್ರಾರ್ಥನಾ ಮಂದಿರಗಳಿಗೆ ಅನುದಾನ ತಡೆ

ಬೆಂಗಳೂರು: ಹಿಂದೂ ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನಗಳ ಹಣ ಅನ್ಯ ಮತೀಯ ಪ್ರಾರ್ಥನಾ ಕೇಂದ್ರಗಳಿಗೆ ನೀಡುವ ಕ್ರಮ ತಡೆ ಕುರಿತು ಸೋಮವಾರ ಸರ್ಕಾರ ಅಧಿಕೃತ ಆದೇಶ ನೀಡಿದೆ.

ಹಿಂದೂ ಧಾರ್ಮಿಕ ದತ್ತಿ ಮತ್ತು ಧರ್ಮಾದಾಯ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಆದೇಶ ಹೊರಬೀಳುವಲ್ಲಿ ಶ್ರಮಿಸಿದ್ದಾರೆ.

ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆ ಮೂಲಕ ಅನ್ಯ ಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಸ್ತಿಕ್ ಮತ್ತು ವರ್ಷಾಸನ ಬಿಡುಗಡೆ ಕುರಿತು ಉಂಟಾಗಿರುವ ಚರ್ಚೆ ಬಗ್ಗೆ ಸರ್ಕಾರ ಅಂತಿಮ ತೀರ್ಮಾನ ಕೈಗೊಂಡಿದ್ದು, ರಾಜ್ಯದ 757 ಪ್ರಾರ್ಥನಾ ಕೇಂದ್ರಗಳಿಗೆ ಹಾಗೂ 111 ವರ್ಷಾಸನ ಪಡೆಯುತ್ತಿರುವ ಪ್ರಾರ್ಥನಾ ಕೇಂದ್ರಗಳಿಗೆ ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆ ಮೂಲಕ ಸರ್ಕಾರ ನೀಡುತ್ತಿದ್ದ ಅನುದಾನ ತಡೆಹಿಡಿಯಲಾಗಿದೆ ಎಂದು ಸಚಿವ ಕೋಟ ತಿಳಿಸಿದ್ದಾರೆ.

ಇನಾಂ ರದ್ದತಿ ಕಾಯ್ದೆ 1977ರ ಪರಿಹಾರಾರ್ಥವಾಗಿ ನೀಡುತ್ತಿರುವ ತಸ್ತಿಕ್ ಮತ್ತು ವರ್ಷಾಸನವನ್ನು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮತ್ತು ದೇವಸ್ಥಾನಗಳಿಂದ ನೀಡುವ ಬದಲು ಇನ್ನು ಮುಂದೆ ಅನ್ಯ ಮತೀಯ ಪ್ರಾರ್ಥನಾ ಕೇಂದ್ರಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಮೂಲಕ ನೀಡಲು ಅನುದಾನ ಬಿಡುಗಡೆ ಮಾಡುವಂತೆ ಎಂದು ರಾಜ್ಯ ಧಾರ್ಮಿಕ ದತ್ತಿ ಇಲಾಖೆ ವರದಿಯನ್ನಾದರಿಸಿ ಸರ್ಕಾರ ಆದೇಶ ನೀಡಿದೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!