ಅಪರಾಧ ತಡೆ ಮಾಸಾಚರಣೆ
ಕಾರ್ಕಳ, ಡಿ. 15 (ಸುದ್ದಿಕಿರಣ ವರದಿ): ನಗರದ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ರೋಟರಿ ಕ್ಲಬ್ ಕಾರ್ಕಳ, ರೋಟರ್ಯಾಕ್ಟ್ ಕ್ಲಬ್ ಮತ್ತು ಕಾರ್ಕಳ ನಗರ ಪೊಲೀಸ್ ಠಾಣೆ ಸಂಯುಕ್ತಾಶ್ರಯದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಕಾಲೇಜು ವಿದ್ಯಾರ್ಥಿಗಳಿಗೆ ಕಾನೂನು ಮಾಹಿತಿ ಹಾಗೂ ಅಪರಾಧ ತಡೆ ಮತ್ತು ಪತ್ತೆ ಹಚ್ಚುವಲ್ಲಿ ವಿದ್ಯಾರ್ಥಿಗಳು ಸಾರ್ವಜನಿಕರ ಪಾತ್ರ ಬಗ್ಗೆ ಕಾರ್ಕಳ ಪೊಲೀಸ್ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ವಿಜಯಪ್ರಸಾದ್ ಮಾಹಿತಿ ನೀಡಿದರು.
ಕಾರ್ಕಳ ಪೊಲೀಸ್ ವೃತ್ತ ನಿರೀಕ್ಷಕ ಸಂಪತ್ ಕುಮಾರ್, ಕಾರ್ಕಳ ನಗರ ಪೊಲೀಸ್ ಠಾಣೆ ಪಿಎಸ್.ಐ. ಮಧು ಬಿ., ಕಾರ್ಕಳ ರೋಟರಿ ಕ್ಲಬ್ ಅಧ್ಯಕ್ಷ ಸುರೇಶ್ ನಾಯಕ್, ಕಾರ್ಯದರ್ಶಿ ಇಕ್ಬಾಲ್ ಅಹಮ್ಮದ್ ಹಾಗೂ ಕಾಲೇಜು ಪ್ರಾಂಶುಪಾಲ ಶ್ರೀವರ್ಮ ಅಜ್ರಿ ಇದ್ದರು
ಕಾಲೇಜು ಪ್ರಾಧ್ಯಾಪಕ ವೃಂದ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.