ಉಡುಪಿ: ಜಿಲ್ಲಾ ಅಲ್ಪಸಂಖ್ಯಾತರ ಇಲಾಖೆಯ ಪ್ರಧಾನಮಂತ್ರಿಗಳ 15 ಅಂಶ ಕಾರ್ಯಕ್ರಮ ಪ್ರಗತಿ ಪರಿಶೀಲನ ಸಭೆ ಜಿಲ್ಲಾಧಿಕಾರಿ ಜಿ. ಜಗದೀಶ್ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಅಲ್ಪಸಂಖ್ಯಾತರ ಸಂಸ್ಥೆಗಳ ಜಿಲ್ಲಾ ಸ್ಥಾಯಿ ಸಮಿತಿ ಉಸ್ತುವಾರಿ ಸದಸ್ಯರಾದ ಆಲ್ವಿನ್ ಡಿ’ಸೋಜ, ಶಬ್ಬೀರ್ ಮೊಹಮದ್, ನೇಮಿರಾಜ ಅರಿಗ, ಜೋಸೆಫ್ ಪಿಂಟೊ ಇದ್ದರು.
ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಅಧಿಕಾರಿ ದೇವೇಂದ್ರ ಬಿರಾದಾರ್ ಮತ್ತು ಸಂಬಂಧಪಟ್ಟ ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳು ಪ್ರಗತಿ ಪರಿಶೀಲನ ವರದಿ, ಕಾರ್ಯಕ್ರಮಗಳ ಅನುಷ್ಠಾನ ಅಂಕಿಅಂಶಗಳನ್ನು ಮಂಡಿಸಿದರು.