Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಆದರ್ಶ ವ್ಯಕ್ತಿತ್ವ ರೂಪಿಸಿಕೊಳ್ಳಿ

ಆದರ್ಶ ವ್ಯಕ್ತಿತ್ವ ರೂಪಿಸಿಕೊಳ್ಳಿ

ಸುದ್ದಿಕಿರಣ ವರದಿ
ಗುರುವಾರ, ಜೂನ್ 16

ಆದರ್ಶ ವ್ಯಕ್ತಿತ್ವ ರೂಪಿಸಿಕೊಳ್ಳಿ
ಉಡುಪಿ: ನವ್ಯಚೇತನ ಶಿಕ್ಷಣ ಸಂಶೋಧನೆ ಮತು ಕಲ್ಯಾಣ ಟ್ರಸ್ಟ್ ವತಿಯಿಂದ ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ಉಡುಪಿ ತಾಲೂಕಿನ ಮೂವರು ವಿದ್ಯಾರ್ಥಿಗಳನ್ನು ವಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ನಡೆಸಲಾಯಿತು.

ಮುಖ್ಯ ಅತಿಥಿಯಾಗಿದ್ದ ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ| ಅಶೋಕ ಕಾಮತ್, ಯಾರೈ ಪರಿಪೂರ್ಣರಲ್ಲ. ತಪ್ಪುಗಳನ್ನು ತಿದ್ದಿಕೊಂಡು ಆದರ್ಶ ವ್ಯಕ್ತಿತ್ವ ರೂಪಿಸಿಕೊಳ್ಳಿ. ಸಾಧಕರಿಂದ ಸ್ಪೂರ್ತಿ ಪಡೆದು ತಾವೂ ಉತ್ತಮ ಸಾಧನೆ ಮಾಡಬೇಕು ಎಂದರು.

ಶಾಲಾಭಿವೃದ್ಧಿ ಸಮಿತಿಯ ನಾಗಭೂಷಣ್ ಶೇಟ್ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಬಿ. ಮಾತನಾಡಿದರು.

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 100 ಅಂಕ ಪಡೆದು ಗಣನೀಯ ಸಾಧನೆ ಮಾಡಿರುವ ವಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯ ಕೇದಾರ ನಾಯಕ್, ಮಲ್ಪೆ ಸರಕಾರಿ ಪದವಿಪೂರ್ವ ಕಾಲೇಜಿನ (ಪ್ರೌಢಶಾಲಾ ವಿಭಾಗ) ಪುನೀತ್ ನಾಯ್ಕ ಮತ್ತು ಉಡುಪಿ ಮಹಿಳಾ ಸರಕಾರಿ ಪದವಿಪೂರ್ವ ಕಾಲೇಜಿನ ಗಾಯತ್ರಿ ಅವರನ್ನು ಸನ್ಮಾನಿಸಲಾಯಿತು.

ನವ್ಯಚೇತನ ಟ್ರಸ್ಟ್ ಅಧ್ಯಕ್ಷ ಡಾ. ಶಿವಾನಂದ ನಾಯಕ್, ಟ್ರಸ್ಟ್ ನ ಧ್ಯೇಯೋದ್ದೇಶ ತಿಳಿಸಿ ಶಿಕ್ಷಣ ಸಂಬಂದಿ ಸಮಾಜಮುಖಿ ಕಾರ್ಯಗಳನ್ನು ಕಳೆದ ಅನೇಕ ವರ್ಷದಿಂದ ಟ್ರಸ್ಟ್ ಮಾಡುತ್ತಾ ಬಂದಿದೆ ಎಂದರು.

ಮುಂಬರುವ ದಿನಗಳಲ್ಲಿ ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯನ್ನಿಟ್ಟುಕೊಂಡು ಉತ್ತಮ ಸಾಧನೆ ಮಾಡಿ, ಸಮಾಜ ಹಾಗೂ ದೇಶಕ್ಕೆ ಉತ್ತಮ ಕೊಡುಗೆ ನೀಡುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಉಡುಪಿಯ ವಿನಯ್ ಸ್ ಅಕಾಡೆಮಿ ವತಿಯಿಂದ ಸನ್ಮಾನಿತ ವಿದ್ಯಾರ್ಥಿಗಳಿಗೆ ಜೆ.ಇ.ಇ. ಹಾಗೂ ಇತರ ಕೋಚಿಂಗ್ ಪುಸ್ತಕಗಳನ್ನು ಉಚಿತವಾಗಿ ನೀಡಲಾಯಿತು.

ಕ್ಷೇತ್ರ ಸಮನ್ವಯ ಅಧಿಕಾರಿ ಉಮಾ, ನವ್ಯಚೇತನ ಟ್ರಸ್ಟ್ ಟ್ರಸ್ಟಿ ರಾಜಶಂಕರ ಇದ್ದರು.
ಚೈತ್ರ ನಿರೂಪಿಸಿದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!