Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಆಮಂತ್ರಣ ಪತ್ರಿಕೆ ಬಿಡುಗಡೆ

ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ: ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ಗುಂಡಿಬೈಲಿನಲ್ಲಿ ನಿರ್ಮಿಸಲ್ಪಟ್ಟ ಪರಿಷತ್ತಿನ ಸ್ವಂತ ಕಟ್ಟಡ ಬ್ರಾಹ್ಮೀ ಸಭಾಭವನ ಸಮರ್ಪಣಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಮಂಗಳವಾರ ಕೃಷ್ಣಮಠ ಕನಕ ಮಂಟಪದಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಯುವ ಬ್ರಾಹ್ಮಣ ಪರಿಷತ್ ಅಧ್ಯಕ್ಷ ವಿಷ್ಣುಪ್ರಸಾದ್ ಪಾಡಿಗಾರು, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಉಪಾಧ್ಯ, ಕಟ್ಟಡ ಸಮಿತಿ ಅಧ್ಯಕ್ಷ ರಂಜನ್ ಕಲ್ಕೂರ, ಪ್ರಧಾನ ಕಾರ್ಯದರ್ಶಿ ಎಂ. ಎಸ್. ವಿಷ್ಣು, ಕಾರ್ಯದರ್ಶಿ ಚಂದ್ರಕಾಂತ್ ಕೆ. ಎನ್. ಮತ್ತು ಪರ್ಯಾಯ ಮಠದ ವ್ಯವಸ್ಥಾಪಕ ಗೋವಿಂದರಾಜ್ ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!