Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಶಿರ್ವ ಆರೋಗ್ಯ ಕೇಂದ್ರಕ್ಕೆ ಭೇಟಿ

ಶಿರ್ವ ಆರೋಗ್ಯ ಕೇಂದ್ರಕ್ಕೆ ಭೇಟಿ

ಶಿರ್ವ: ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಿಜೆಪಿ ಮಂಗಳೂರು ವಿಭಾಗ ಉಸ್ತುವಾರಿ ಕೆ. ಉದಯಕುಮಾರ್ ಶೆಟ್ಟಿ ಭೇಟಿ ನೀಡಿ ವೈದ್ಯಾಧಿಕಾರಿಗಳು ಹಾಗೂ ಕೋವಿಡ್ ಟಾಸ್ಕ್ ಫೋರ್ಸ್ ಪ್ರಮುಖರೊಂದಿಗೆ ವಿಚಾರವಿನಿಮಯ ನಡೆಸಿದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ವ್ಯವಸ್ಥೆ ಕುರಿತು ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರು ಮಾಹಿತಿ ನೀಡಿದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ವೈದ್ಯಾಧಿಕಾರಿ ಡಾ. ಕೃಷ್ಣಮೂರ್ತಿ, ಶಿರ್ವ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಪ್ರವೀಣ್ ಪೂಜಾರಿ, ಬಿಜೆಪಿ ಕೈಗಾರಿಕಾ ಪ್ರಕೋಷ್ಠ ಸಹಸಂಚಾಲಕ ಗಿರಿಧರ್ ಪ್ರಭು, ಶಿರ್ವ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ವಾರಿಜ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀನಿವಾಸ ಶೆಣೈ ಮತ್ತು ಸುರೇಶ್ ನಾಯಕ್, ಮಾಜಿ ಸದಸ್ಯ ರಮೇಶ್, ರಾಜೇಶ್ ನಾಯಕ್, ಸಂದೀಪ್ ಬಂಟಕಲ್ಲು ಮುಂತಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!