Monday, August 15, 2022
Home ಸಮಾಚಾರ ರಾಜ್ಯ ವಾರ್ತೆ ಆರೋಗ್ಯ ಕವಚ ಆ್ಯಂಬುಲೆನ್ಸ್ ಸನ್ನದ್ಧ

ಆರೋಗ್ಯ ಕವಚ ಆ್ಯಂಬುಲೆನ್ಸ್ ಸನ್ನದ್ಧ

ಆರೋಗ್ಯ ಕವಚ ಆ್ಯಂಬುಲೆನ್ಸ್ ಸನ್ನದ್ಧ

ಉಡುಪಿ: ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸಂಭವಿಸಬಹುದಾದ ರಸ್ತೆ ಅಪಘಾತಗಳಿಂದ ಉಂಟಾಗುವ ಜೀವ ಹಾನಿ ತಡೆಯುವ ದೃಷ್ಟಿಯಿಂದ 108 ಆರೋಗ್ಯ ಕವಚ ಆ್ಯಂಬುಲೆನ್ಸ್ ಉಡುಪಿ ಜಿಲ್ಲೆಯೂ ಸೇರಿದಂತೆ ರಾಜ್ಯಾದ್ಯಂತ ಸಜ್ಜುಗೊಂಡಿದೆ ಎಂದು ಉಡುಪಿ ಜಿಲ್ಲಾ ವ್ಯವಸ್ಥಾಪಕ ಮಹಾಬಲ ತಿಳಿಸಿದ್ದಾರೆ.

ರಜೆ ರದ್ದುಗೊಳಿಸಿ ಸೇವೆಗೆ ಸಿದ್ಧ
ಸಾಮಾನ್ಯ ದಿನಗಳಿಗಿಂತ ಹೊಸ ವರ್ಚಾಚರಣೆಗಳಲ್ಲಿ ಸರಾಸರಿ 30ರಿಂದ 35 ಶೇ. ಅಪಘಾತ ಪ್ರಕರಣಗಳು ವರದಿಯಾಗಿವೆ. 108 ಆ್ಯಂಬುಲೆನ್ಸ್ ಸೇವೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯೊಂದಿಗೆ ನಿಕಟ ಸಹಕಾರ ಹೊಂದಿದ್ದು, ಹೆಚ್ಚಿನ ತುರ್ತು ಪರಿಸ್ಥಿತಿ ನಿರೀಕ್ಷಿಸುವ ಪ್ರದೇಶಗಳಲ್ಲಿ ಹೆಚ್ಚುವರಿ ಆ್ಯಂಬುಲೆನ್ಸ್ ಗಳನ್ನು ನಿಯೋಜಿಸಲಾಗುವುದು.

ಹೆಚ್ಚುವರಿ ಸೇವೆಗಾಗಿ ಆ್ಯಂಬುಲೆನ್ಸ್ ಸಿಬ್ಬಂದಿಯ ಸಾಪ್ತಾಹಿಕ ರಜೆಯನ್ನೂ ರದ್ದುಗೊಳಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಆ್ಯಂಬುಲೆನ್ಸ್ ಗಳಲ್ಲಿ ಇಂಧನ, ಆಮ್ಲಜನಕ, ವೈದ್ಯಕೀಯ ಉಪಕರಣಗಳನ್ನು ಇರಿಸಲಾಗಿದೆ.

ಜಿಲ್ಲೆಯಲ್ಲಿ 18 ಆ್ಯಂಬುಲೆನ್ಸ್
ಜಿಲ್ಲೆಯಲ್ಲಿ 18 ಆ್ಯಂಬುಲೆನ್ಸ್ ಗಳನ್ನು ತಜ್ಞ ಸಿಬ್ಬಂದಿಗಳೊಂದಿಗೆ ನಿಯೋಜಿಸಲಾಗಿದೆ. ತುರ್ತು ಪರಿಸ್ಥಿತಿಗಳಲ್ಲಿ 108 ಉಚಿತ ಸಂಖ್ಯೆಗೆ ಡಯಲ್ ಮಾಡಬಹುದು. ಅದರಿಂದ ಜೀವನ್ಮರಣ ಹೋರಾಟದಲ್ಲಿ ನರಳುತ್ತಿರುವ ಗಾಯಾಳುಗಳನ್ನು ಸುರಕ್ಷತೆಗಾಗಿ ಆ್ಯಂಬುಲೆನ್ಸ್ ಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಬಹುದು. ಸಾವು ನೋವುಗಳು ಹಾಗೂ ಅನಾಹುತಗಳ ಮಾಹಿತಿಗಳನ್ನು ಪೊಲೀಸ್, ಅಗ್ನಿಶಾಮಕ ಸೇವೆ ಮತ್ತು ಆರೋಗ್ಯ ಇಲಾಖೆಗಳೊಂದಿಗೆ ಹಂಚಿಕೊಳ್ಳಲಾಗುವುದು.

ಹೆಚ್ಚಿನ ಮಾಹಿತಿಗಾಗಿ 7022099108ನ್ನು ಸಂಪರ್ಕಿಸುವಂತೆ ಮಹಾಬಲ ತಿಳಿಸಿದ್ದಾರೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!