Saturday, August 13, 2022
Home ಸಮಾಚಾರ ಜಿಲ್ಲಾ ಸುದ್ದಿ ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಈಶ್ವರಪ್ಪ ನಿರ್ದೋಷಿ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಈಶ್ವರಪ್ಪ ನಿರ್ದೋಷಿ

ಸುದ್ದಿಕಿರಣ ವರದಿ
ಬುಧವಾರ, ಜುಲೈ 20

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಈಶ್ವರಪ್ಪ ನಿರ್ದೋಷಿ
ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಉಡುಪಿ ಪೊಲೀಸರು ಪೂರ್ಣಗೊಳಿಸಿದ್ದು, ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದಾರೆ.

ಪಾಟೀಲ್ ಸಾವು ಪ್ರಕರಣ ಕೊಲೆ ಅಥವಾ ಕೊಲೆಗೆ ಪ್ರಚೋದನೆ ಎಂಬುದಕ್ಕೆ ಸೂಕ್ತ ಸಾಕ್ಷಿಗಳು ಲಭಿಸಿಲ್ಲ. ಆದರೆ, ಎಲ್ಲಾ ತಾಂತ್ರಿಕ ಸಾಕ್ಷಿಗಳನ್ನು ಸಂಗ್ರಹಿಸಿ ಕೋರ್ಟಿಗೆ ಸಲ್ಲಿಸಲಾಗಿದೆ.

ವರದಿಯಲ್ಲಿ ಸಿಸಿ ಟಿವಿ ವೀಡಿಯೋ, ಆಡಿಯೋ, ಮೊಬೈಲ್ ಸಂದೇಶ, ಬ್ಯಾಂಕ್ ದಾಖಲೆ, ಗುತ್ತಿಗೆ ವಿವರ, ಕುಟುಂಬಿಕರು ಮತ್ತು ಸ್ನೇಹಿತರ ಹೇಳಿಕೆಗಳನ್ನು ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಅಥವಾ ಅವರ ಕಡೆಯವರಿಂದ ಸಂತೋಷ್ ಪಾಟೀಲ್ ಗೆ ಬೆದರಿಕೆ ಬಂದಿದೆ ಎಂಬುದಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಈಶ್ವರಪ್ಪ ಮನೆಯಲ್ಲಿ ಸಂಭ್ರಮದ ವಾತಾವರಣ ಮನೆಮಾಡಿದೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!