Wednesday, July 6, 2022
Home ಸಮಾಚಾರ ಜಿಲ್ಲಾ ಸುದ್ದಿ ಉಡುಪಿಯಲ್ಲಿ ಸಂಭ್ರಮಾಚರಣೆ

ಉಡುಪಿಯಲ್ಲಿ ಸಂಭ್ರಮಾಚರಣೆ

ಉಡುಪಿ: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದನ್ನು ಸ್ವಾಗತಿಸಿದ ನಗರ ಬಿಜೆಪಿ ಮಂಗಳವಾರ ಸಂಭ್ರಮಾಚರಣೆ ಮಾಡಿತು.

ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಅಭಿವೃದ್ಧಿಗೆ ಭರಪೂರ ಸಹಕಾರ ನೀಡಿದ ಬಸವರಾಜ್ ಬೊಮ್ಮಾಯಿ, ರಾಜ್ಯದ ಮುಖ್ಯಮಂತ್ರಿಯವರಾಗಿ ಆಯ್ಕೆಯಾಗಿರುವುದು ಸಂತಸದಾಯಕ ಎಂದು ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ತಿಳಿಸಿದ್ದಾರೆ.

ಉಡುಪಿ ನಗರ ಬಿಜೆಪಿ ವತಿಯಿಂದ ಇಲ್ಲಿನ ಸರ್ವಿಸ್ ಬಸ್ ನಿಲ್ದಾಣದ ಕ್ಲಾಕ್ ಟವರ್ ಬಳಿ ರಾತ್ರಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.

ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ ಮತ್ತು ದಿನೇಶ್ ಅಮೀನ್, ಜಿಲ್ಲಾ ಬಿಜೆಪಿ ಕೋಶಾಧಿಕಾರಿ ಪ್ರವೀಣ್ ಕುಮಾರ್ ಕಪ್ಪೆಟ್ಟು, ನಗರ ಯುವ ಮೋರ್ಚಾ ಅಧ್ಯಕ್ಷ ರೋಶನ್ ಶೆಟ್ಟಿ, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ವಿನಯಕುಮಾರ್ ಕಲ್ಮಾಡಿ, ಎಸ್.ಟಿ ಮೋರ್ಚಾ ಅಧ್ಯಕ್ಷ ಅಶೋಕ್ ನಾಯ್ಕ್, ನಗರಸಭಾ ಸ್ಥಾಯಿಸಮಿತಿ ಅಧ್ಯಕ್ಷ ಗಿರೀಶ್ ಅಂಚನ್ ಹಾಗೂ ನಗರಸಭೆಯ ಸದಸ್ಯರು, ಪಕ್ಷ ಪ್ರಮುಖರು ಮತ್ತು ಕಾರ್ಯಕರ್ತರು ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!