Tuesday, May 17, 2022
Home ಸಮಾಚಾರ ಜಿಲ್ಲಾ ಸುದ್ದಿ ನೂತನ ಉಸ್ತುವಾರಿ ಮಂತ್ರಿಗೆ ಅಭಿನಂದನೆ

ನೂತನ ಉಸ್ತುವಾರಿ ಮಂತ್ರಿಗೆ ಅಭಿನಂದನೆ

ಸುದ್ದಿಕಿರಣ ವರದಿ
ಗುರುವಾರ, ಜನವರಿ 27

ನೂತನ ಉಸ್ತುವಾರಿ ಮಂತ್ರಿಗೆ ಅಭಿನಂದನೆ
ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾ ಉಸ್ತುವಾರಿ ಸಚಿವರಾಗಿ ನಿಯುಕ್ತರಾದ ಬಂದರು ಮತ್ತು ಮೀನುಗಾರಿಕೆ ಹಾಗೂ ಒಳನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ ಅವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಭಿನಂದಿಸಿದರು.

ಉಡುಪಿ ಜಿಲ್ಲಾ ಉಸ್ತುವಾಗಿ ಸಚಿವರಾಗಿ ನಿಯುಕ್ತಿಗೊಂಡ ಬಳಿಕ ಪ್ರಥಮ ಬಾರಿಗೆ ಗಣರಾಜ್ಯೋತ್ಸವ ಆಚರಣೆಗೆ ಉಡುಪಿಗೆ ಆಗಮಿಸಿದ ಸಚಿವರನ್ನು ಕುಯಿಲಾಡಿ ಸುರೇಶ್ ನಾಯಕ್ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಭೇಟಿಯಾಗಿ ಹೂಗುಚ್ಛ ನೀಡಿ ಸ್ವಾಗತಿಸಿ, ಅಭಿನಂದಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕ್ಕರ್ ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!