Wednesday, July 6, 2022
Home ಸಮಾಚಾರ ಜಿಲ್ಲಾ ಸುದ್ದಿ ಏ. 23, 24: ಕುತ್ಪಾಡಿ ಆನಂದ ಗಾಣಿಗ ಸ್ಮರಣಾರ್ಥ ಆನಂದೋತ್ಸವ

ಏ. 23, 24: ಕುತ್ಪಾಡಿ ಆನಂದ ಗಾಣಿಗ ಸ್ಮರಣಾರ್ಥ ಆನಂದೋತ್ಸವ

ಸುದ್ದಿಕಿರಣ ವರದಿ
ಶುಕ್ರವಾರ, ಏಪ್ರಿಲ್ 22

ಏ. 23, 24: ಕುತ್ಪಾಡಿ ಆನಂದ ಗಾಣಿಗ ಸ್ಮರಣಾರ್ಥ ಆನಂದೋತ್ಸವ
ಉಡುಪಿ: ನಾಡಿನ ಪ್ರತಿಷ್ಠಿತ ರಂಗಭೂಮಿ ಸಂಸ್ಥೆ ರಂಗಭೂಮಿ ಉಡುಪಿ ವತಿಯಿಂದ ಸಂಸ್ಥೆಯ ಸ್ಥಾಪಕರಲ್ಲೋರ್ವರಾದ ದಿ| ಕುತ್ಪಾಡಿ ಆನಂದ ಗಾಣಿಗ ಸ್ಮರಣಾರ್ಥ ಆನಂದೋತ್ಸವ ಏ. 23 ಮತ್ತು 24ರಂದು ಇಲ್ಲಿನ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯಲಿದೆ.

ಏ. 23ರಂದು ಸಂಜೆ 5.45ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶಿಕ್ಷಣ ತಜ್ಞ, ಮಾಹೆ ಸಹ ಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ಅವರಿಗೆ ತಲ್ಲೂರು ಗಿರಿಜಾ ಶಿವರಾಮ ಶೆಟ್ಟಿ ಸಂಸ್ಕೃತಿ ಸಾಧಕ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಂಗಭೂಮಿ ಅಧ್ಯಕ್ಷ ಡಾ| ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದ್ದಾರೆ.

ಕಾರ್ಯಕ್ರಮವನ್ನು ನಾಡೋಜ ಡಾ| ಜಿ. ಶಂಕರ್ ಉದ್ಘಾಟಿಸುವರು. ಸಭಾಧ್ಯಕ್ಷತೆಯನ್ನು ಮಾಹೆ ನಿವೃತ್ತ ಉಪಕುಲಪತಿ ಡಾ. ಎಂ.ಎಸ್. ವಲಿಯತ್ತನ್ ವಹಿಸುವರು. ಮಣಿಪಾಲ ಕೆಎಂಸಿ ನಿವೃತ್ತ ಡೀನ್ ಡಾ. ಪಿಎಲ್.ಎನ್ ರಾವ್, ಉದ್ಯಮಿ ಪುರುಷೋತ್ತಮ ಪಿ. ಶೆಟ್ಟಿ, ಎಂಜಿಎಂ ಕಾಲೇಜಿನ ಪ್ರಿನ್ಸಿಪಾಲ್ ಡಾ| ದೇವಿದಾಸ ಎಸ್. ನಾಯ್ಕ್, ರಂಗಭೂಮಿ ಅಧ್ಯಕ್ಷ ಡಾ| ತಲ್ಲೂರು ಶಿವರಾಮ ಶೆಟ್ಟಿ ಉಪಸ್ಥಿತರಿರುವರು.

ಕರ್ನಾಟಕ ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ. ಎಂ.ಎಲ್. ಸಾಮಗ ಅಭಿನಂದನ ಭಾಷಣ ಮಾಡುವರು.

ಸಭಾ ಕಾರ್ಯಕ್ರಮದ ಬಳಿಕ ಚಿತ್ತಾರ ಬೆಂಗಳೂರು ಅವರಿಂದ ನಾಯಿ ಕಳೆದಿದೆ ನಾಟಕ ಪ್ರದರ್ಶನಗೊಳ್ಳಲಿದೆ.

ಏ. 24ರಂದು ಸಂಜೆ 5.45ಕ್ಕೆ ಆನಂದೋತ್ಸವದ ಎರಡನೇ ದಿನದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಂಗಭೂಮಿ ಉಡುಪಿ ಅಧ್ಯಕ್ಷ ಡಾ| ತಲ್ಲೂರು ಶಿವರಾಮ ಶೆಟ್ಟಿ ವಹಿಸುವರು.

ಶಾಸಕ ಕೆ. ರಘುಪತಿ ಭಟ್, ತುಳುಕೂಟ ಉಡುಪಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಉದ್ಯಮಿಗಳಾದ ನಾಗೇಶ್ ಹೆಗ್ಡೆ ಮತ್ತು ರತ್ನಾಕರ ಶೆಟ್ಟಿ ಮುಂಬೈ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ಪೂರ್ಣಿಮಾ ಹಾಗೂ ರಂಗ ನಿರ್ದೇಶಕ ಮಂಜುನಾಥ ಬಡಿಗೇರ ಉಪಸ್ಥಿತರಿರುವರು.

ಸಭಾ ಕಾರ್ಯಕ್ರಮದ ಬಳಿಕ ರಂಗಭೂಮಿ ಉಡುಪಿ ಕಲಾವಿದರಿಂದ ವಿಶಾಂಕೇ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಡಾ| ತಲ್ಲೂರು ತಿಳಿಸಿದರು.

ರಂಗಭೂಮಿ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುತ್ಪಾಡಿ ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!