Monday, August 15, 2022
Home ಸಮಾಚಾರ ರಾಷ್ಟ್ರೀಯ ವಾರ್ತೆ ಐದು ಮಕ್ಕಳ ಹೆತ್ತ ಮಾತೆ

ಐದು ಮಕ್ಕಳ ಹೆತ್ತ ಮಾತೆ

ಸುದ್ದಿಕಿರಣ ವರದಿ
ಮಂಗಳವಾರ, ಜುಲೈ 26

ಐದು ಮಕ್ಕಳ ಹೆತ್ತ ಮಾತೆ
ಜೈಪುರ್: ಮದುವೆಯಾಗಿ ಏಳು ವರ್ಷವಾದರೂ ಮಕ್ಕಳಾಗಿಲ್ಲ ಎಂಬ ಕೊರಗಿನಲ್ಲಿದ್ದ ಮಹಿಳೆಯೊಬ್ಬರು ಬರೋಬ್ಬರಿ ಐದು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆದರೆ, ಮೂರು ನವಜಾತ ಶಿಶುಗಳು ಸಾವನ್ನಪ್ಪಿದ್ದು, ತಾಯಿ ಹಾಗೂ ಇಬ್ಬರು ಮಕ್ಕಳನ್ನು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇಲ್ಲಿನ ಕರೌಲಿ ಜಿಲ್ಲೆಯ ಮಸಲ್ ಪುರದ ಪಿಪ್ರಾನಿ ಗ್ರಾಮದ ಅಶ್ಕ್ ಅಲಿ ಹಾಗೂ ರೇಷ್ಮಾ ಕಳೆದ ಏಳು ವರ್ಷದ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ, ಮಕ್ಕಳಾಗಿರಲಿಲ್ಲ. ಇದೀಗ ರೇಷ್ಮಾ, ಕರೌಲಿ ಆಸ್ಪತ್ರೆಯಲ್ಲಿ ಐವರು ಮಕ್ಕಳಿಗೆ ಜನ್ಮ ನೀಡಿದ್ದು, ಈ ಘಟನೆಯಿಂದ ವೈದ್ಯರೇ ಅಚ್ಚರಿಗೊಂಡಿದ್ದಾರೆ.

ಏಳು ತಿಂಗಳ ಅವಧಿಯಲ್ಲಿ ಗರ್ಭಿಣಿ ಐವರು ಮಕ್ಕಳಿಗೆ ಜನ್ಮ ನೀಡಿದ್ದರಿಂದ ಮೂರು ಶಿಶುಗಳು ಈಗಾಗಲೇ ಸಾವನ್ನಪ್ಪಿವೆ. ಉಳಿದ ಎರಡು ಮಕ್ಕಳ ಸ್ಥಿತಿಯೂ ಚಿಂತಾಜನಕವಾಗಿದೆ. ತಾಯಿ- ಮಕ್ಕಳನ್ನು ಜೈಪುರ್ ಮಕ್ಕಳ ಘಟಕ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!