Saturday, July 2, 2022
Home ಸಮಾಚಾರ ಜಿಲ್ಲಾ ಸುದ್ದಿ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್

ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್

ಉಡುಪಿ: ಕೊರೋನಾ 2ನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಘೋಷಿಸಿದ ಲಾಕ್ ಡೌನ್ ನಿಂದ ಸಂಕಷ್ಟಕ್ಕೊಳಗಾದ ಕಟ್ಟಡ ಕಾರ್ಮಿಕರು ಹಾಗೂ ಸಾಮಾನ್ಯ ವರ್ಗದವರಿಗೆ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೀಡಲಾಗುವ ಆಹಾರ ಸಾಮಗ್ರಿಗಳ ಕಿಟ್ ನ್ನು ಶಾಸಕ ಕೆ. ರಘುಪತಿ ಭಟ್ ವಿತರಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ. ಎಸ್. ಸುಬ್ರಹ್ಮಣ್ಯ, ಹಿರಿಯ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಾರ್ಯದರ್ಶಿ ಕಾವೇರಿ, ಮಂಗಳೂರು ಸಹಾಯಕ ಕಾರ್ಮಿಕ ಆಯುಕ್ತ ನಾಗರಾಜ್, ಮಂಗಳೂರು ಕಾರ್ಮಿಕ ಅಧಿಕಾರಿ ಅಮರೇಂದ್ರ, ಉಡುಪಿ ವಿಭಾಗದ ಕಾರ್ಮಿಕ ಅಧಿಕಾರಿ ಕುಮಾರ್ ಬಿ. ಆರ್, ಸಿ.ಆರ್.ಇ.ಡಿ.ಎ.ಐ ಅಧ್ಯಕ್ಷ ಜೆರ್ರಿ ವಿನ್ಸೆಂಟ್ ಡಯಾಸ್, ಪ್ರಧಾನ ಕಾರ್ಯದರ್ಶಿ ಜೋಯಾನ್ ಲೂಯಿಸ್, ಸದಸ್ಯರಾದ ಗ್ಲೆನ್ ಡಯಾಸ್, ಅಮಿತ್ ಇದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!