Saturday, July 2, 2022
Home ಸಮಾಚಾರ ಜಿಲ್ಲಾ ಸುದ್ದಿ ಯಶಪಾಲ್ ಹತ್ಯೆ ಬೆದರಿಕೆ: ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಯಶಪಾಲ್ ಹತ್ಯೆ ಬೆದರಿಕೆ: ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಸುದ್ದಿಕಿರಣ ವರದಿ
ಸೋಮವಾರ, ಜೂನ್ 13

ಯಶಪಾಲ್ ಹತ್ಯೆ ಬೆದರಿಕೆ: ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಮೀನುಗಾರ ಮುಖಂಡ ಯಶಪಾಲ್ ಸುವರ್ಣ ಅವರಿಗೆ ಹತ್ಯೆ ಬೆದರಿಕೆಯ ಪ್ರಚೋದನಾಕಾರಿ ಪೋಸ್ಟ್ ಮಾಡಿರುವ ದುಷ್ಕರ್ಮಿಗಳನ್ನು ಶೀಘ್ರ ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಕರಾವಳಿ ಮೂಲ ಮೀನುಗಾರರ ಸಂಘದ ನೇತೃತ್ವದ ಮೀನುಗಾರ ಮುಖಂಡರ ನಿಯೋಗ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರನ್ನು ಸೋಮವಾರ ಭೇಟಿಯಾಗಿ ಮನವಿ ಸಲ್ಲಿಸಿದರು.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಮತ್ತು ಮಹಾಲಕ್ಷ್ಮೀ ಕೋ- ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾಗಿ, ಧಾರ್ಮಿಕ ಸಾಮಾಜಿಕ ಸಹಕಾರಿ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡು ಕರಾವಳಿ ಜಿಲ್ಲೆಯ ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಸೂಕ್ತವಾಗಿ ಸ್ಪಂದಿಸಿ ಮೀನುಗಾರರ ಪರ ಹೋರಾಟದಲ್ಲಿ ಸದಾ ಮುಂಚೂಣಿಯಲ್ಲಿ ನಿಲ್ಲುವ ಯಶಪಾಲ್ ಸುವರ್ಣ ಅವರಿಗೆ ಹತ್ಯೆ ಬೆದರಿಕೆಯನ್ನು ಸಮಸ್ತ ಮೀನುಗಾರ ಸಮುದಾಯ ತೀವ್ರವಾಗಿ ಖಂಡಿಸುತ್ತಿದ್ದು, ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಕರಾವಳಿ ಮೂಲ ಮೀನುಗಾರರ ಸಂಘದ ಅಧ್ಯಕ್ಷ ಅಶ್ವಥ ಕಾಂಚನ್, ಮಂಗಳೂರು ಏಳು ಪಟ್ನ ಮೊಗವೀರ ಸಂಯುಕ್ತ ಸಭಾ ಅಧ್ಯಕ್ಷ ಗೌತಮ್ ಕೋಡಿಕಲ್, ದ.ಕ. ಮೊಗವೀರ ಯುವ ವೇದಿಕೆ ಅಧ್ಯಕ್ಷ ಜಗದೀಶ್ ಬಂಗೇರ, ಕರಾವಳಿ ಮೀನುಗಾರರ ವಿವಿಧೋದ್ದೇಶ ಸಹಕಾರ ಸಂಘ ಅಧ್ಯಕ್ಷ ಸುಭಾಶ್ಚಂದ್ರ ಕಾಂಚನ್ ಬೋಳಾರ, ಮಹಾಜನ ಬೆಂಗ್ರೆ ಸಭಾ ನಿಕಟಪೂರ್ವ ಅಧ್ಯಕ್ಷ ಚೇತನ್ ಬೆಂಗ್ರೆ, ಮೀನುಗಾರ ಮುಖಂಡರಾದ ಲೀಲಾಧರ ತಣ್ಣೀರುಬಾವಿ, ಚಂದ್ರಶೇಖರ ಶ್ರೀಯಾನ್, ಸುಭಾಷ್ ಬೋಳೂರು, ಯಶವಂತ ಬಿ, ಅಮೀನ್ ಉಳ್ಳಾಲ, ಬಾಬು ಬಂಗೇರ ಉಳ್ಳಾಲ, ಸುಧೀರ್ ಶ್ರೀಯಾನ್, ಸುದರ್ಶನ, ಕೇಶವ ಪುತ್ರನ್, ಯಾದವ ಸಾಲಿಯಾನ್, ಕಿಶೋರ್ ಮುಕ್ಕ, ಉದಯ ಅಮೀನ್, ವಿಜಿತ್, ಭಾಸ್ಕರ್, ಚಿದಾನಂದ, ಪುರುಷೋತ್ತಮ ಅಮೀನ್, ಚಂದ್ರಹಾಸ ಬೆಂಗ್ರೆ, ರಮೇಶ್ ಬೆಂಗ್ರೆ ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!