Monday, August 15, 2022
Home ಸಮಾಚಾರ ಜಿಲ್ಲಾ ಸುದ್ದಿ ಕಡಲ್ಕೊರೆತ ತಡೆ: ಸಿಎಂ ಜೊತೆ ಚರ್ಚೆ

ಕಡಲ್ಕೊರೆತ ತಡೆ: ಸಿಎಂ ಜೊತೆ ಚರ್ಚೆ

ಸುದ್ದಿಕಿರಣ ವರದಿ
ಬುಧವಾರ, ಜುಲೈ 6

ಕಡಲ್ಕೊರೆತ ತಡೆ: ಸಿಎಂ ಜೊತೆ ಚರ್ಚೆ
ಉಡುಪಿ: ಕರಾವಳಿಯನ್ನು ಬಾಧಿಸುವ ಕಡಲ್ಕೊರೆತ ತಡೆಗೆ ಪರಿಹಾರ ಹಿನ್ನೆಲೆಯಲ್ಲಿ ಈ ತಿಂಗಳ 10ರಂದು ಸಿಎಂ ಬೊಮ್ಮಾಯಿ ಚರ್ಚಿಸಲಾಗುವುದು ಎಂದು ಬಂದರು ಮತ್ತು ಮೀನುಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಹೇಳಿದರು.

ಜಿಲ್ಲೆಯಲ್ಲಿ ಮಳೆ ಪರಿಸ್ಥಿತಿ ಕುರಿತು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪರಿಶೀಲನೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಡಲ್ಕೊರೆತ ತಡೆಗೆ ದ.ಕ. ಜಿಲ್ಲೆಯ ಉಳ್ಳಾಲ ಬೆಟ್ಟಪಾಡಿಯಲ್ಲಿ ಸೀ ವೇವ್ ಬ್ರೇಕರ್ ತಂತ್ರಜ್ಞಾನ ಮತ್ತು ಉಡುಪಿ ಜಿಲ್ಲೆಯ ಬೈಂದೂರು ಮರವಂತೆಯಲ್ಲಿ ಡಕ್ ಫೂಟ್ ತಂತ್ರಜ್ಞಾನಗಳನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ‌.

ಕಾಸರಗೋಡಿನ ನೆಲ್ಲಿಕುಂಜ್ಞ ಭಾಗದಲ್ಲಿ ಸೀ ವೇ ಬ್ರೇಕರ್ ತಂತ್ರಜ್ಞಾನವನ್ನು ಯಶಸ್ವಿಯಾಗಿ ಬಳಸಲಾಗಿದೆ. ಅಲ್ಲಿನ ತಂತ್ರಜ್ಞರು ಬೆಟ್ಟಪಾಡಿಗೆ ಬಂದು ಪರಿಶೀಲಿಸಿದ್ದಾರೆ. ಆದರೆ, ಈ ಯೋಜನೆಗೆ ಸ್ಥಳೀಯರ ವಿರೋಧವಿದ್ದು, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಯಾಯ ಪ್ರದೇಶಕ್ಕನುಗುಣವಾದ ತಂತ್ರಜ್ಞಾನ ಅಳವಡಿಸಲಾಗುತ್ತದೆ. ಸಮದ್ರದಲ್ಲಿ ಕಲ್ಲಿನ ಗೋಡೆ ನಿರ್ಮಾಣಕ್ಕೆ ಆದ್ಯತೆ ನೀಡುವುದಿಲ್ಲ ಎಂದರು.

ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಸ್ವತಃ ಮುಖ್ಯಮಂತ್ರಿ ಬೊಮ್ಮಯಿ ಸೂಚಿಸಿದ್ದು, ತಾನು ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇನೆ. ಉ.ಕ. ಜಿಲ್ಲಾ ಉಸ್ತುವಾರಿ ಕೋಟ ಶ್ರೀನಿವಾಸ ಪೂಜಾರಿ, ದ.ಕ. ಜಿಲ್ಲಾ ಉಸ್ತುವಾರಿ ಸುನಿಲ್ ಕುಮಾರ್ ಮತ್ತು ತಾನು ಜುಲೈ 10ರಂದು ಮುಖ್ಯಮಂತ್ರಿಯನ್ನು ಭೇಟಿಯಾಗಿ ವರದಿ ಸಲ್ಲಿಸಲಿದ್ದೇವೆ. ಈ ಯೋಜನೆಗೆ ದೊಡ್ಡ ಮೊತ್ತ ಬೇಕಾಗಿದ್ದು, ಅದನ್ನು ಮುಖ್ಯಮಂತ್ರಿ ನೀಡುವ ವಿಶ್ವಾಸ ಇದೆ ಎಂದರು.

ಸುದ್ದಿಗೋಷ್ಟಿಯಲ್ಲಿ ಜಿಲ್ಲಾಧಿಕಾರಿ ಕೂರ್ಮಾ ರಾವ್, ಜಿ.ಪಂ ಸಿಇಓ ಪ್ರಸನ್ನ, ಶಾಸಕರಾದ ಸುಕುಮಾರ್ ಶೆಟ್ಟಿ ಮತ್ತು ರಘುಪತಿ ಭಟ್, ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಡಿ.ಎಫ್.ಓ ಆಶೀಶ್ ರೆಡ್ಡಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಇದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!