Saturday, July 2, 2022
Home ಸಮಾಚಾರ ಜಿಲ್ಲಾ ಸುದ್ದಿ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಕಪ್ಪು ಪಟ್ಟಿ ಪ್ರದರ್ಶನ

ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಕಪ್ಪು ಪಟ್ಟಿ ಪ್ರದರ್ಶನ

ಉಡುಪಿ: ದೇಶದಲ್ಲಿ ವೈದ್ಯರ ಮೇಲಿನ ಹಲ್ಲೆಯನ್ನು ವಿರೋಧಿಸಿ ಹಾಗೂ ವೈದ್ಯರ ರಕ್ಷಣೆಗೆ ಆಗ್ರಹಿಸಿ ಶುಕ್ರವಾರ ಭಾರತೀಯ ವೈದ್ಯಕೀಯ ಸಂಘ (ಐ.ಎಂ.ಎ) ಉಡುಪಿ- ಕರಾವಳಿ ಶಾಖೆ ಸದಸ್ಯರು ನಗರದ ಐಎಂಎ ಭವನ ಎದುರು ಕಪ್ಪು ಪಟ್ಟಿ ಪ್ರದರ್ಶನ ನಡೆಸಿ, ಪ್ರತಿಭಟನೆ ನಡೆಸಿದರು.

ಐಎಂಎ ಅಧ್ಯಕ್ಷ ಡಾ. ಉಮೇಶ್ ಪ್ರಭು ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯದರ್ಶಿ ಡಾ. ಪ್ರಕಾಶ್ ಭಟ್ ಸೇರಿದಂತೆ ಹಲವು ವೈದ್ಯರು ಭಾಗವಹಿಸಿದ್ದರು.

ಬಳಿಕ ಜಿಲ್ಲಾಧಿಕಾರಿ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಲಾಯಿತು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!