Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಕರಾವಳಿ ಸಚಿವರಿಗೆ ಪ್ರಮುಖ ಖಾತೆ: ಉಡುಪಿ ಜಿಲ್ಲಾ ಬಿಜೆಪಿ ಹರ್ಷ

ಕರಾವಳಿ ಸಚಿವರಿಗೆ ಪ್ರಮುಖ ಖಾತೆ: ಉಡುಪಿ ಜಿಲ್ಲಾ ಬಿಜೆಪಿ ಹರ್ಷ

ಕರಾವಳಿ ಸಚಿವರಿಗೆ ಪ್ರಮುಖ ಖಾತೆ: ಉಡುಪಿ ಜಿಲ್ಲಾ ಬಿಜೆಪಿ ಹರ್ಷ

(ಸುದ್ದಿಕಿರಣ ವರದಿ)
ಉಡುಪಿ: ಬಿಜೆಪಿ ನೇತೃತ್ವದ ರಾಜ್ಯ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಕರಾವಳಿ ಕರ್ನಾಟಕದ ಉಡುಪಿ ಮತ್ತು ದ.ಕ. ಜಿಲ್ಲೆಗಳ ನೂತನ ಸಚಿವರಿಗೆ ಪ್ರಮುಖ ಖಾತೆಗಳ ಹಂಚಿಕೆಯಾಗಿರುವುದನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ.

ಉಡುಪಿ ಜಿಲ್ಲೆಯ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದ.ಕ. ಜಿಲ್ಲೆಯ ಸುಳ್ಯ ಶಾಸಕ ಎಸ್. ಅಂಗಾರ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾಗಿ ನಿಯುಕ್ತಿಗೊಂಡಿರುವುದು ಸಂತಸ ತಂದಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ನೂತನ ಸಚಿವತ್ರಯರಿಗೆ ಅಭಿನಂದನೆ ಸಲ್ಲಿಸಿರುವ ಅವರು, ಸಚಿವರು ತಮ್ಮ ಜವಾಬ್ದಾರಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ವಿಶ್ವಾಸವಿದೆ ಎಂದಿದ್ದಾರೆ.

ಈ ಆಯ್ಕೆ ಉಡುಪಿ, ದ.ಕ. ಜಿಲ್ಲೆಗಳ ಸಹಿತ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ನಾಂದಿ ಹಾಡಲಿ ಎಂದು ಕುಯಿಲಾಡಿ ಹಾರೈಸಿದ್ದಾರೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!