Thursday, July 7, 2022
Home ಸಮಾಚಾರ ರಾಷ್ಟ್ರೀಯ ವಾರ್ತೆ ಕಲ್ಯಾಣ್ ಸಿಂಗ್ ನಿಧನ

ಕಲ್ಯಾಣ್ ಸಿಂಗ್ ನಿಧನ

ಉತ್ತರ ಪ್ರದೇಶ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಇನ್ನಿಲ್ಲ

ಲಖನೌ: ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶ ಮಾಜಿ ಸಿಎಂ, ರಾಜಸ್ಥಾನದ ಮಾಜಿ ರಾಜ್ಯಪಾಲ ಕಲ್ಯಾಣ್ ಸಿಂಗ್ (89) ಶನಿವಾರ ನಿಧನರಾದರು.

ಸೆಪ್ಸಿಸ್ ಹಾಗೂ ಬಹು ಅಂಗಾಂಗ ವೈಫಲ್ಯದಿಂದ ಅವರು‌ ಬಳಲುತ್ತಿದ್ದರು.

ಲಖನೌ ನಲ್ಲಿರುವ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಎಸ್ ಜಿಪಿಜಿಐ) ನಲ್ಲಿ ಕಲ್ಯಾಣ್ ಸಿಂಗ್ ದೀರ್ಘಕಾಲದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಈಚೆಗೆ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟು ಡಯಾಲಿಸಿಸ್ ಚಿಕಿತ್ಸೆ ನೀಡಲಾಗುತ್ತಿತ್ತು.

ಮೋದಿ ಸಂತಾಪ
ಪ್ರಧಾನಿ ನರೇಂದ್ರ ಮೋದಿ, ಕಲ್ಯಾಣ್ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.ಕ

ಲ್ಯಾಣ್ ಸಿಂಗ್ ಸಮಾಜದ ಹಿಂದುಳಿದ ವರ್ಗದ ಕೋಟ್ಯಂತರ ಜನರ ಧ್ವನಿಯಾಗಿದ್ದರು. ರೈತರು, ಯುವಜನರ ಸಬಲೀಕರಣಕ್ಕೆ ಕಲ್ಯಾಣ್ ಸಿಂಗ್ ಶ್ರಮಿಸಿದ್ದಾರೆ.

ಅವರ ನಿಧನದಿಂದ ಉಂಟಾಗಿರುವ ದುಃಖವನ್ನು ಹೇಳಲು ಶಬ್ದಗಳಿಲ್ಲ. ಕಲ್ಯಾಣ್ ಸಿಂಗ್ ಮುತ್ಸದ್ದಿ, ಹಿರಿಯ ಆಡಳಿತಗಾರ, ಶ್ರೇಷ್ಠ ವ್ಯಕ್ತಿ ಎಂದು ಮೋದಿ ಸಂತಾಪ ಸಂದೇಶದಲ್ಲಿ ಬಣ್ಣಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!