ಸುದ್ದಿಕಿರಣ ವರದಿ
ಶುಕ್ರವಾರ, ಜೂನ್ 17
ರಾಹುಲ್ ವಿಚಾರಣೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಇಡಿ ಸಂಸ್ಥೆ ನಡೆಸುತ್ತಿರುವ ವಿಚಾರಣೆ ಹಾಗೂ ಈಚಿನ ದೆಹಲಿ ಪೊಲೀಸ್ ದೌರ್ಜನ್ಯ ವಿರೋಧಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಬಳಿ ಬೃಹತ್ ಪ್ರತಿಭಟನೆ ನಡೆಯಿತು.
ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆ ದರು.
ಮಣಿಪಾಲದ ಕಾಯಿನ್ ಸರ್ಕಲ್ನಿಂದ ಹೊರಟ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸರಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಜಿಲ್ಲಾಧಿಕಾರಿ ಕಚೇರಿ ಬಳಿ ಆಗಮಿಸಿದ ಪ್ರತಿಭಟನಕಾರರು ಜಿಲ್ಲಾಧಿಕಾರಿ ಕಚೇರಿ ಆವರಣದೊಳಗೆ ನುಗ್ಗಲು ಯತ್ನಿಸಿದರು. ಆದರೆ, ಪೊಲೀಸರು ಪ್ರತಿಭಟನಾಕಾರರು ಒಳಪ್ರವೇಶಿಸಿದಂತೆ ತಡೆಯೊಡ್ಡಿದರು.
ಪ್ರತಿಭಟನೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಬಿಜೆಪಿ
ಸೇಡಿನ ರಾಜಕಾರಣದ ಮೂಲಕ ಕಾಂಗ್ರೆಸ್ ನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಇಡಿ ಇಲಾಖೆಯನ್ನು ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ. ಗಫೂರ್, ಮಾಜಿ ಸಚಿಚ ಅಭಯಚಂದ್ರ ಜೈನ್ ಮಾತನಾಡಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ವೀಣಾ ಅವರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ರಮೇಶ್ ಕಾಂಚನ್, ದಿನೇಶ್ ಪುತ್ರನ್, ನೀರೆ ಕೃಷ್ಣ ಶೆಟ್ಟಿ, ಭುಜಂಗ ಶೆಟ್ಟಿ, ಗೀತಾ ವಾಗ್ಳೆ, ಮಲ್ಯಾಡಿ ಶಿವರಾಮ ಶೆಟ್ಟಿ, ಬಿ. ನರಸಿಂಹಮೂರ್ತಿ, ಪ್ರಖ್ಯಾತ ಶೆಟ್ಟಿ, ಭಾಸ್ಕರ ರಾವ್ ಕಿದಿಯೂರು, ಬಿಪಿನ್ ಚಂದ್ರಪಾಲ್ ನಕ್ರೆ, ಅಣ್ಣಯ್ಯ ಶೇರಿಗಾರ್, ಕುಶಲ ಶೆಟ್ಟಿ, ಸರಸು ಬಂಗೇರ, ಹಿರಿಯಣ್ಣ, ದೇವಕಿ ಸಣ್ಣಯ್ಯ, ದಿವಾಕರ ಕುಂದರ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಮಂಜುನಾಥ ಪೂಜಾರಿ, ನವೀನಚಂದ್ರ ಸುವರ್ಣ, ದಿನಕರ ಹೇರೂರು, ಸಂತೋಷ್ ಕುಲಾಲ್, ಸದಾಶಿವ ದೇವಾಡಿಗ, ವಿವೇಕ ಹೆಗ್ಡೆ ಕುಂದಾಪುರ, ಶಶಿಧರ ಶೆಟ್ಟಿ ಎಲ್ಲೂರು, ಯತೀಶ್ ಕರ್ಕೇರ, ಉದ್ಯಾವರ ನಾಗೇಶ್ ಕುಮಾರ್, ಕಿಶೋರ್ ಕುಮಾರ್ ಎರ್ಮಾಳ್, ಅಬೀಬ್ ಅಲಿ, ಪ್ರಶಾಂತ ಪೂಜಾರಿ, ಅಮೃತ್ ಶೆಣೈ, ಇಸ್ಮಾಯಿಲ್ ಅತ್ರಾಡಿ, ಹರೀಶ್ ಶೆಟ್ಟಿ ಪಾಂಗಾಳ, ಹರೀಶ್ ಶೆಟ್ಟಿ ಹಾವಂಜೆ, ಲೂಯಿಸ್ ಲೊಬೋ, ರೋಶನ್ ಶೆಟ್ಟಿ, ಸತೀಶ್ ಕೊಡವೂರು, ಲಕ್ಷ್ಮಣ ಪೂಜಾರಿ, ಕೃಷ್ಣಮೂರ್ತಿ ಆಚಾರ್ಯ, ರೋಶಿನಿ ಒಲಿವೆರಾ, ಪ್ರಖ್ಯಾತ್ ಶೆಟ್ಟಿ, ದೀಪಕ್ ಕೋಟ್ಯಾನ್, ಶಿವಾಜಿ ಸುವರ್ಣ, ಹರೀಶ್ ಕಿಣಿ, ವ್ನಿಘೇಶ್ ಕಿಣಿ ಮೊದಲಾದವರಿದ್ದರು.