ಸುದ್ದಿಕಿರಣ ವರದಿ
ಭಾನುವಾರ, ಜನವರಿ 9, 2022
ಕಾನೂನು ಉಲ್ಲಂಘಿಸಿದ ಕಾಂಗ್ರೆಸ್: ಗೃಹಸಚಿವ ಆರಗ
ಬೆಂಗಳೂರು: ವಾರಾಂತ್ಯ ಕರ್ಫ್ಯೂ ನಡುವೆಯೂ ಮೇಕೆದಾಟು ಪಾದಯಾತ್ರೆ ನಡೆಸುವ ಮೂಲಕ ಕಾಂಗ್ರೆಸ್, ಕಾನೂನನ್ನು ಉಲ್ಲಂಘಿಸಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ.
ಇಡೀ ರಾಜ್ಯಕ್ಕೇ ವೀಕೆಂಡ್ ಕರ್ಪ್ಯೂ ವಿಧಿಸಲಾಗಿದೆ. ಜನಸಾಮಾನ್ಯರಿಗೊಂದು ಕಾನೂನು, ಕಾಂಗ್ರೆಸ್ ಗೆ ಒಂದು ಕಾನೂನು ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದ ಜನತೆ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಐದು ವರ್ಷ ಕಾಲ ಆಡಳಿತ ನಡೆಸಿದಾಗ ಕಾಂಗ್ರೆಸ್ ಗೆ ಮೇಕೆದಾಟು ನೆನಪಾಗಲಿಲ್ಲ. ಅಧಿಕಾರದಲ್ಲಿದ್ದಾಗ ಮೇಕೆದಾಟು ಮರೆತಿದ್ದ ಕಾಂಗ್ರೆಸ್ ಜನರಲ್ಲಿ ಕ್ಷಮೆ ಕೇಳಬೇಕು. ಕಾಂಗ್ರೆಸ್ ವಿರುದ್ಧ ಕ್ರಮ ಕೈಗೊಳ್ಳುವ ಸಂಪೂರ್ಣ ಅಧಿಕಾರ ಜಿಲ್ಲಾಡಳಿತಕ್ಕೆ ನೀಡಿದ್ದೇವೆ. ಯಾವ ಕ್ರಮ ಎಂದು ಆಮೇಲೆ ಗೊತ್ತಾಗುತ್ತದೆ.
ಕಾನೂನು ಉಲ್ಲಂಘನೆ ಮಾಡಿದವರ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತದೆ ಎಂದು ಸಚಿವ ಜ್ಞಾನೇಂದ್ರ ಎಚ್ಚರಿಕೆ ನೀಡಿದರು