Monday, July 4, 2022

ಕಾನೂನು ಹೋರಾಟ

ಉಡುಪಿ: ಮಸೀದಿ ಹೆಸರಿಗೆ 2020ರಲ್ಲಿ ಈಗಿನ ಬಿಜೆಪಿ ಸರಕಾರದ ಅವಧಿಯಲ್ಲಿಯೇ ಗಜೆಟ್ ನೋಟಿಫಿಕೇಶನ್ ಆಗಿದೆ. ಇದೀಗ ಸರಕಾರ ಜಮೀನನ್ನು ಮರಳಿ ಪಡೆದಿರುವ ವಿರುದ್ಧ ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ಮಸೀದಿ ಪರ ಕಾನೂನು ಹೋರಾಟಗಾರ, ಅಸೋಸಿಯೇಶನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ ಜಿಲ್ಲಾಧ್ಯಕ್ಷ ಹುಸೇನ್ ಕೋಡಿಬೆಂಗ್ರೆ ತಿಳಿಸಿದ್ದಾರೆ.

ಜಿಲ್ಲಾಡಳಿತ ಮತ್ತು ಕಂದಾಯ ಇಲಾಖೆ ಎಲ್ಲ ರೀತಿಯ ಕಾನೂನಾತ್ಮಕ ಪ್ರಕ್ರಿಯೆ ಬಳಿಕವೇ ಗಜೆಟ್ ನೋಟಿಫಿಕೇಶನ್ ಮಾಡಲಾಗಿದೆ. ಅದಕ್ಕೆ ಬೇಕಾದ ಎಲ್ಲ ದಾಖಲೆಗಳು ವಕ್ಫ್ ಇಲಾಖೆ ಹಾಗೂ ಬೋರ್ಡ್ ಮತ್ತು ಕಂದಾಯ ಇಲಾಖೆಯಲ್ಲಿವೆ ಎಂದವರು ತಿಳಿಸಿದ್ದಾರೆ.

ಹೀಗಿದ್ದರೂ ಮಸೀದಿಗೆ ಸಂಬಂಧಪಡದವರು ಕಾನೂನುಬಾಹಿರವಾಗಿ ಮನವಿ ನೀಡಿದ್ದು, ಜಿಲ್ಲಾಧಿಕಾರಿ ಹಾಗೂ ಶಾಸಕರು ಅವರಿಗೆ ಸಾಥ್ ನೀಡಿದ್ದಾರೆ. ಆ ಮೂಲಕ ಕಂದಾಯ ಸಚಿವ ಆರ್. ಅಶೋಕ್ ಈ ವಕ್ಫ್ ಆಸ್ತಿಯನ್ನು ಸರಕಾರದ ಹೆಸರಿಗೆ ಮಾಡಿಕೊಂಡಿರುವುದು ಖಂಡನೀಯ ಎಂದು ಹುಸೇನ್ ತಿಳಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!