ಕಾಪು ಪುರಸಭೆ ಗೆಲುವಿಗೆ ಹರ್ಷ
ಕಾಪು: ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಸ್ಪಷ್ಟ ಬಹುಮತದಿಂದ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಅದಕ್ಕಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಹರ್ಷ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಭಿವೃದ್ಧಿ ಕಾರ್ಯ ಮತ್ತು ಪುರಸಭೆಯ ಜನಪರ ಕಾರ್ಯಗಳನ್ನು ಮೆಚ್ಚಿ ಪುರಸಭೆ ವ್ಯಾಪ್ತಿಯ ಮತದಾರರು ಬಿಜೆಪಿಯನ್ನು ಆಶೀರ್ವದಿಸಿದ್ದು, ಮುಂದಿನ ದಿನಗಳಲ್ಲಿ ಕಾಪು ಪುರಸಭೆಯನ್ನು ಮಾದರಿ ಪುರಸಭೆಯನ್ನಾಗಿ ಮಾಡೋಣ ಎಂದವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ಗೆಲುವು ಸಂಘಟನೆ ಹಾಗೂ ಪಕ್ಷದ ಕಾರ್ಯಕರ್ತರ ಗೆಲುವು ಎಂದು ಬಣ್ಣಿಸಿರುವ ನಯನಾ ಗಣೇಶ್, ಗೆಲುವಿಗೆ ಸಹಕರಿಸಿದ ಮತದಾರರು, ಹಗಲಿರುಳು ಶ್ರಮಿಸಿದ ಪಕ್ಷ ಕಾರ್ಯಕರ್ತರು ಹಾಗೂ ನಾಯಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ