Thursday, July 7, 2022
Home ಸಮಾಚಾರ ರಾಜ್ಯ ವಾರ್ತೆ ಕಾಫಿ ಬೆಳೆಗಾರರ ಸಮಸ್ಯೆ ಪರಿಹರಿಸಲು ಮನವಿ

ಕಾಫಿ ಬೆಳೆಗಾರರ ಸಮಸ್ಯೆ ಪರಿಹರಿಸಲು ಮನವಿ

ಉಡುಪಿ: ರಾಜ್ಯದ ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆ ಪರಿಹರಿಸಿ, ಕಾಫಿ ಉದ್ಯಮದ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳುವಂತೆ ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದರು.
ಬುಧವಾರ ಸಚಿವೆಯನ್ನು ಭೇಟಿ ಮಾಡಿದ ಸಂಸದೆ, ಕಾಫಿ ಬೆಳೆಗಾರರ ಸಂಕಷ್ಟ ಮನದಟ್ಟು ಮಾಡಿದರು. ಕಳೆದ ಕೆಲವು ವರ್ಷಗಳಿಂದ ಹವಾಮಾನ ವೈಪರೀತ್ಯದಿಂದಾಗಿ ಕಾಫಿ ಬೆಳೆಗಾರರು ತೀವ್ರ ಸಂಕಷ್ಟದಲ್ಲಿದ್ದಾರೆ. ಅತಿವೃಷ್ಟಿ, ಅನಾವೃಷ್ಟಿ, ಕಾರ್ಮಿಕರ ಸಮಸ್ಯೆ, ಬೆಳೆಗೆ ತಕ್ಕ ಬೆಲೆ ಇಲ್ಲದಿರುವುದು ಸೇರಿದಂತೆ ವಿವಿಧ ಸಮಸ್ಯೆ ಎದುರಿಸುತ್ತಲೇ ಬಂದಿದ್ದಾರೆ. ಅತಿವೃಷ್ಟಿ, ರೋಗಬಾಧೆ ಇತ್ಯಾದಿ ಸಮಸ್ಯೆಯಿಂದ ಬಸವಳಿದ ಕಾಫಿ ಉದ್ಯಮವನ್ನು ಪುನಃಶ್ಚೇತನಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಅಗತ್ಯ ಪರಿಹಾರ ಹಾಗೂ ಸಾಲ ನೀತಿಯನ್ನು ಬೆಳೆಗಾರರಿಗೆ ಸಹಾಯಕವಾಗುವ ನಿಟ್ಟಿನಲ್ಲಿ ಕೈಗೊಳ್ಳಬೇಕು. ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಮನವಿ ಮಾಡಿದರು.
ಕಾಫಿ ಬೆಳೆಗಾರರ ಸಮಸ್ಯೆ ಪರಿಹರಿಸಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!