Saturday, August 13, 2022
Home ಸಮಾಚಾರ ಜಿಲ್ಲಾ ಸುದ್ದಿ ಕಾರಂತ ಥೀಮ್ ಪಾರ್ಕಿಗೆ ಭೇಟಿ

ಕಾರಂತ ಥೀಮ್ ಪಾರ್ಕಿಗೆ ಭೇಟಿ

ಸುದ್ದಿಕಿರಣ ವರದಿ
ಗುರುವಾರ, ಜನವರಿ 13, 2022

ಕಾರಂತ ಥೀಮ್ ಪಾರ್ಕಿಗೆ ಭೇಟಿ
ಕೋಟ: ಸ್ವಾತಂತ್ರ್ಯ ಹೋರಾಟಗಾರ ವೀರ್ ಸಾವರ್ಕರ್ ಮೊಮ್ಮಗ ಸಾತ್ಯಕಿ ಸಾವರ್ಕರ್ ಅವರು ಇಲ್ಲಿನ ಡಾ| ಶಿವರಾಮ ಕಾರಂತ ಥೀಮ್ ಪಾರ್ಕಿಗೆ ಭೇಟಿ ನೀಡಿದರು.

ಕೆರೆಯ ಮಧ್ಯದಲ್ಲಿರುವ ಕಾರಂತರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ರಂಗ ಮಂದಿರ, ಆರ್ಟ್ ಗ್ಯಾಲರಿ, ಅಂಗನವಾಡಿ, ಗ್ರಂಥಾಲಯ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಭಾಷೆಗಳನ್ನು ಶ್ರೀಮಂತಗೊಳಿಸುವಲ್ಲಿ ಕವಿಗಳ ಪಾತ್ರ ಅಮೋಘವಾದದ್ದು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ| ಶಿವರಾಮ ಕಾರಂತರ ನೆನಪಿನಲ್ಲಿ ಈ ಥೀಮ್ ಪಾರ್ಕ್ ನಿರ್ಮಾಣ ಶ್ಲಾಘನೀಯ. ಕಾರಂತರ ಸಾಧನೆಗಳು ಮುಂದಿನ ಜನಾಂಗಕ್ಕೆ ತಲುಪುವಂತಾಗಲಿ ಎಂದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಾರಂತ ಪ್ರತಿಷ್ಠಾನ ಕಾರ್ಯಾಧ್ಯಕ್ಷ ಆನಂದ ಸಿ. ಕುಂದರ್, ಟ್ರಸ್ಟಿ ಸುಬ್ರಾಯ ಆಚಾರ್ಯ, ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯ ಪ್ರಕಾಶ್ ಹಂದಟ್ಟು, ಪ್ರಕಾಶ್ ಮಲ್ಪೆ ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!