Wednesday, August 10, 2022
Home ಸಮಾಚಾರ ರಾಜ್ಯ ವಾರ್ತೆ ಕೃಷ್ಣಮಠಕ್ಕೆ ಕಾಗೇರಿ ಭೇಟಿ

ಕೃಷ್ಣಮಠಕ್ಕೆ ಕಾಗೇರಿ ಭೇಟಿ

ಸುದ್ದಿಕಿರಣ ವರದಿ
ಮಂಗಳವಾರ, ಏಪ್ರಿಲ್ 19

ಕೃಷ್ಣಮಠಕ್ಕೆ ಕಾಗೇರಿ ಭೇಟಿ
ಉಡುಪಿ: ಕರ್ನಾಟಕ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಂಗಳವಾರ ಉಡುಪಿ ಶ್ರೀಕೃಷ್ಣಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.

ಬಳಿಕ ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

ಉಡುಪಿ ಜಿಲ್ಲಾ ಬಿ.ಜೆ.ಪಿ. ಅಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್, ಕಾಪು ಶಾಸಕ ಲಾಲಾಜಿ ಮೆಂಡನ್, ಬಿಜೆಪಿ ಮಂಗಳುರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ಮಠದ ದಿವಾನ ವರದರಾಜ ಆಚಾರ್, ಪರ್ಯಾಯ ಸಮಿತಿ ಕಾರ್ಯದರ್ಶಿ ವಿಷ್ಣು ಪ್ರಸಾದ್ ಪಾಡಿಗಾರ್ ಮೊದಲಾದವರಿದ್ದರು.

 

 

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!