ಉಡುಪಿ: ಭಾನುವಾರ ನಗರಕ್ಕಾಗಮಿಸಿದ ರಾಜ್ಯ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಇಲ್ಲಿನ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಬಳಿಕ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರನ್ನು ಭೇಟಿ ಮಾಡಿ, ಅವರನ್ನು ಗೌರವಿಸಿದರು. ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.
ಶಾಸಕ ರಘುಪತಿ ಭಟ್, ಬಿ.ಜೆ.ಪಿ. ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ಪರ್ಯಾಯ ಮಠ ವ್ಯವಸ್ಥಾಪಕ ಗೋವಿಂದರಾಜ್, ಪಿ.ಆರ್.ಓ ಕಡೆಕಾರ್ ಶ್ರೀಶ ಭಟ್, ಶ್ರೀಕೃಷ್ಣ ಸೇವಾ ಸಮಿತಿಯ ರಾಮಚಂದ್ರ ರಾವ್ ಮತ್ತು ಪ್ರದೀಪ್ ರಾವ್ ಇದ್ದರು