Monday, August 15, 2022
Home ಸಮಾಚಾರ ರಾಜ್ಯ ವಾರ್ತೆ ಕೃಷ್ಣಮಠದಲ್ಲಿ ನಾಡಿನ ದೊರೆಯಿಂದ ಗುರುಪೂಜನ

ಕೃಷ್ಣಮಠದಲ್ಲಿ ನಾಡಿನ ದೊರೆಯಿಂದ ಗುರುಪೂಜನ

ಸುದ್ದಿಕಿರಣ ವರದಿ
ಬುಧವಾರ, ಜುಲೈ 13

ಕೃಷ್ಣಮಠದಲ್ಲಿ ನಾಡಿನ ದೊರೆಯಿಂದ ಗುರುಪೂಜನ
ಉಡುಪಿ: ಗುರು ಪೂರ್ಣಿಮೆ ಅಂಗವಾಗಿ ನಾಡಿನ ದೊರೆ ಬಸವರಾಜ ಬೊಮ್ಮಾಯಿ ಬುಧವಾರ ಪರ್ಯಾಯ ಪೀಠಸ್ಥ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರಿಗೆ ಗುರುಪೂಜನ ಮಾಡಿದರು.

ಮಳೆ ಹಾನಿ ವೀಕ್ಷಣೆಗೆ ಜಿಲ್ಲೆಗಾಗಮಿಸಿದ್ದ ಮುಖ್ಯಮಂತ್ರಿ ಬೊಮ್ಮಾಯಿ, ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ತ್ವರಿತ ಪರಿಹಾರ ಕಾರ್ಯ ಬಗ್ಗೆ ಸೂಚಿಸಿ, ಬಳಿಕ ಕೃಷ್ಣಮಠಕ್ಕೆ ಭೇಟಿ ನೀಡಿದರು.

ಶ್ರೀಮಠದ ದಿವಾನ ವರದರಾಜ ಭಟ್ ಕಿನ್ನಿಮೂಲ್ಕಿ ಮುಖ್ಯಮಂತ್ರಿಗೆ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು.

ಪರ್ಯಾಯ ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಕನಕ ನವಗ್ರಹ ಕಿಂಡಿ ಮೂಲಕ ಕೃಷ್ಣ ದರ್ಶನ ಮಾಡಿಸಿದರು.

ಆರತಿ ಬೆಳಗಿದ ಸಿಎಂ
ಗುರು ಪೂರ್ಣಿಮೆ ಪ್ರಯುಕ್ತ ಪಯರ್ಾಯ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರಿಗೆ ಮುಖ್ಯಮಂತ್ರಿ ಬೊಮ್ಮಾಯಿ ಕಾಷಾಯ ವಸ್ತ್ರ, ಫಲವಸ್ತು, ಕಾಲುದೀಪ, ಗುರುಕಾಣಿಕೆ ಸಮರ್ಪಿಸಿ ಆರತಿ ಬೆಳಗಿ ಗುರುವಂದನೆ ಸಲ್ಲಿಸಿದರು.

ಪರ್ಯಾಯ ಶ್ರೀಪಾದರು ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಸ್ಮರಣಿಕೆಯೊಂದಿಗೆ ಗೌರವಿಸಿದರು.

ಮುಖ್ಯಮಂತ್ರಿ ಸಂಸ್ಕೃತಿ ಪಾಲನೆಗೆ ಮೆಚ್ಚುಗೆ ವ್ಯಕ್ತಪಡಿಸಿ, ನಾಡಿಗೆ ಸುಭಿಕ್ಷೆಯಾಗಲಿ ಎಂದು ಶ್ರೀಕೃಷ್ಣಮುಖ್ಯಪ್ರಾಣರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಆರ್. ಅಶೋಕ್, ಎಸ್. ಅಂಗಾರ ಮತ್ತು ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಕೆ. ರಘುಪತಿ ಭಟ್ ಮತ್ತು ಬಿ. ಎಂ. ಸುಕುಮಾರ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿ.ಜೆ.ಪಿ. ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್, ಬಿ.ಜೆ.ಪಿ. ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ ಶೆಟ್ಟಿ, ಉದ್ಯಮಿ ಗುರ್ಮೆ ಸುರೇಶ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದು, ಶ್ರೀಪಾದರಿಗೆ ಗುರುವಂದನೆ ಸಲ್ಲಿಸಿದರು.

ಪರ್ಯಾಯ ಮಠದ ಪಾರುಪತ್ಯಗಾರ ಶ್ರೀನಿವಾಸ ಉಪಾಧ್ಯಾಯ ಹಾಗೂ ಪರ್ಯಾಯ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್, ವಾಸುದೇವ ಪೆರಂಪಳ್ಳಿ ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!