ಸುದ್ದಿಕಿರಣ ವರದಿ
ಗುರುವಾರ, ಜುಲೈ 21
ಸಾಧಿಸುವ ಕೆಚ್ಚಿದ್ದರೆ ಅಸಾಧ್ಯವೆಂಬುದಿಲ್ಲ
ಕುಂದಾಪುರ: ಸಾಧಿಸಬೇಕೆಂಬ ಕೆಚ್ಚು ಇದ್ದರೆ ಅಸಾಧ್ಯವಾದುದು ಯಾವುದೂ ಇಲ್ಲ ಎಂದು ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಸುರೇಶ್ ಮರಕಾಲ ಹೇಳಿದರು.
ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿಕೆಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಶಿಕ್ಷಕರಿಗಾಗಿ ಆಯೋಜಿಸಿದ್ದ ಶಿಕ್ಷಕ ಪುನಶ್ಚೇತನ ಕಾರ್ಯಾಗಾರ ಪ್ರೇರಣಾ ಕಾರ್ಯಕ್ರಮದ ಸಂಪನ್ಮೂಲವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.
ಎರಡೂ ಕೈಗಳಿಲ್ಲದ ಜೆಸಿಕಾ ಕಾಕ್ ಪದವಿ ಮುಗಿಸಿ, ಕಾಲಿನಿಂದ ಕಂಪ್ಯೂಟರ್ ಆಪರೇಟ್ ಮಾಡ್ತಾಳೆ, ಕರಾಟೆ ಬ್ಲ್ಯಾಕ್ ಬೆಲ್ಟ್, ಸ್ಕೇಟಿಂಗ್, ಕಾರ್ ಡ್ರೈವಿಂಗ್ ಮಾಡ್ತಾಳೆ, ಪೈಲೆಟ್ ಆಗ್ತಾಳೆ ಎಂದಮೇಲೆ ಸಾಧಿಸುವ ಛಲವಿದ್ದಲ್ಲಿ ಯಾವುದೂ ಅಸಾಧ್ಯವಲ್ಲ ಎಂದರು.
ಸಂಸ್ಥೆ ಪ್ರಾಂಶುಪಾಲೆ ಚಿಂತನಾ ರಾಜೇಶ್, ಉಪ ಪ್ರಾಂಶುಪಾಲೆ ಮತ್ತು ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶುಭಾ ಕೆ. ಎನ್., ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಜಗದೀಶ್ ಆಚಾರ್ ಸಾಸ್ತಾನ, ಸಹಾಯಕ ಮುಖ್ಯ ಶಿಕ್ಷಕಿ ಕವಿತಾ ಭಟ್, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ ಜಿ. ಭಟ್, ಸಂಯೋಜಕ ಶಿಕ್ಷಕಿ ಆರತಿ ಶೆಟ್ಟಿ ಮೊದಲಾದವರಿದ್ದರು.
ಪ್ರೌಢಶಾಲಾ ಸಹಾಯಕ ಮುಖ್ಯ ಶಿಕ್ಷಕ ಚಂದ್ರಶೇಖರ್ ಶೆಟ್ಟಿ ನಿರೂಪಿಸಿ, ವಂದಿಸಿದರು.
ಈ ಸಂದರ್ಭದಲ್ಲಿ ಸುರೇಶ ಮರಕಾಲ ಅವರನ್ನು ಗೌರವಿಸಲಾಯಿತು.