Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆ

ರಾಷ್ಟ್ರೀಯ ಕೈಮಗ್ಗ ದಿನಾಚರಣೆ

ರಾಷ್ಟ್ರೀಯ ಕೈಮಗ್ಗ ದಿನಾಚರಣೆ

(ಸುದ್ದಿಕಿರಣ ವರದಿ)
ಉಡುಪಿ: ರಾಷ್ಟ್ರದ ಕೈಮಗ್ಗ ಪರಂಪರೆ ಉತ್ತೇಜಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಆಶಯದ ಸ್ಥಳೀಯದಿಂದ ಜಾಗತಿಕ ಎಂಬ ಕರೆಯಂತೆ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಆಶ್ರಯದಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯನ್ನು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಸಲಾಯಿತು. ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

ಅಭ್ಯಾಗತರಾಗಿ ಆಗಮಿಸಿದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ವಿ. ಸುನಿಲ್ ಕುಮಾರ್ ಅವರು ಪಕ್ಷದ ಹಿರಿಯ ಕಾರ್ಯಕರ್ತೆ ಹಾಗೂ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸೆರೆಮನೆ ವಾಸ ಅನುಭವಿಸಿದ್ದ 80 ಬಡಗಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಜೀವ ನಗರ ನಿವಾಸಿ ನಳಿನಿ ರಾವ್ ಅವರಿಗೆ ಕೈಮಗ್ಗದ ಸೀರೆ ಉಡುಗೊರೆ ನೀಡಿ ಗೌರವಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು.

ಉಡುಪಿ ಶಾಸಕ ಕೆ.ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಗೀತಾಂಜಲಿ ಸುವರ್ಣ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ರೇಶ್ಮಾ ಉದಯ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಕೋಶಾಧಿಕಾರಿ ಮಾಯಾ ಕಾಮತ್, ಕಾರ್ಯದರ್ಶಿ ನೀರಜಾ ಶೆಟ್ಟಿ, ಅಶ್ವಿನಿ ಶೆಟ್ಟಿ, ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಮಹಿಳಾ ಮೋರ್ಚಾ ಉಡುಪಿ ನಗರ ಉಪಾಧ್ಯಕ್ಷೆ ಸರೋಜಾ ಶೆಣೈ, ಪ್ರಧಾನ ಕಾರ್ಯದರ್ಶಿಗಳಾದ ಸುಜಾಲಾ ಸತೀಶ್, ಸುಧಾ ಪೈ ಹಾಗೂ ಮಹಿಳಾ ಮೋರ್ಚಾ ಜಿಲ್ಲಾ ಮತ್ತು ಮಂಡಲ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!