ಸುದ್ದಿಕಿರಣ ವರದಿ
ಮಂಗಳವಾರ, ಜೂನ್ 14
ಸರ್ಕಾರಿ ಗೌರವದೊಂದಿಗೆ ಕೊಡ್ಗಿ ಅಂತ್ಯ ಸಂಸ್ಕಾರ
ಕುಂದಾಪುರ: ಸೋಮವಾರ ನಿಧನರಾದ ಬಿಜೆಪಿ ಹಿರಿಯ ನಾಯಕ, ಮಾಜಿ ಶಾಸಕ, ರಾಜ್ಯ ಮೂರನೇ ಹಣಕಾಸು ಆಯೋಗ ಅಧ್ಯಕ್ಷರಾಗಿದ್ದ ಎ. ಜಿ. ಕೊಡ್ಗಿ ಅವರ ಅಂತ್ಯಸಂಸ್ಕಾರ ಮಂಗಳವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಕುಂದಾಪುರ ತಾಲೂಕಿನ ಅಮಾಸೆಬೈಲಿನಲ್ಲಿ ನಡೆಯಿತು.
ಗೃಹ ಸಚಿವ ಆರಗ ಜ್ಞಾನೇಂದ್ರ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್, ಬಿಜೆಪಿ ನಾಯಕರಾದ ಉದಯಕುಮಾರ್ ಶೆಟ್ಟಿ, ಪ್ರಮೋದ್ ಮಧ್ವರಾಜ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ವಿಧಾನ ಪರಿಷತ್ ಮಾಜಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಮೊದಲಾದವರು ಕೊಡ್ಗಿಯವರ ಅಂತಿಮ ದರ್ಶನ ಪಡೆದರು.
ಕೊಡ್ಗಿ ಹಿರಿಯ ಪುತ್ರ ಕಿರಣ್ ಕುಮಾರ್ ಕೊಡ್ಗಿ ಅವರು ಎ.ಜಿ. ಕೊಡ್ಗಿ ಅವರ ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಷ ಮಾಡಿದರು. ಕಿಶೋರ್ ಕುಮಾರ್ ಕೊಡ್ಗಿ ಸೇರಿದಂತೆ ಐವರು ಪುತ್ರರು, ಒಬ್ಬಾಕೆ ಪುತ್ರಿ ಹಾಗೂ ಕೊಡ್ಗಿ ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದರು