Saturday, August 13, 2022
Home ಸಮಾಚಾರ ಜಿಲ್ಲಾ ಸುದ್ದಿ ಜಿಲ್ಲಾಡಳಿತದಿಂದ ಕೊರಗರಿಗೆ ನ್ಯಾಯ: ಸಚಿವ ಸುನಿಲ್ ಭರವಸೆ

ಜಿಲ್ಲಾಡಳಿತದಿಂದ ಕೊರಗರಿಗೆ ನ್ಯಾಯ: ಸಚಿವ ಸುನಿಲ್ ಭರವಸೆ

ಸುದ್ದಿಕಿರಣ ವರದಿ
ಭಾನುವಾರ, ಜನವರಿ 2, 2022
ಜಿಲ್ಲಾಡಳಿತದಿಂದ ಕೊರಗರಿಗೆ ನ್ಯಾಯ: ಸಚಿವ ಸುನಿಲ್ ಭರವಸೆ

ಬ್ರಹ್ಮಾವರ: ಮೆಹಂದಿ ಕಾರ್ಯಕ್ರಮ ಸಂದರ್ಭದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾದ ಕೊರಗ ಸಮುದಾಯದ ಕುಟುಂಬಕ್ಕೆ ಜಿಲ್ಲಾಡಳಿತ ನ್ಯಾಯ ಒದಗಿಸಲಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಭರವಸೆ ನೀಡಿದರು.

ಭಾನುವಾರ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಗ ಕಾಲನಿಗೆ ಭೇಟಿ ನೀಡಿದ ಅವರು, ಕಳೆದ ಡಿ. 27ರಂದು ಪೊಲೀಸ್ ದೌರ್ಜನ್ಯಕ್ಕೊಳಗಾದ ಕೊರಗ ಕುಟುಂಬದೊಂದಿಗೆ ಮಾತುಕತೆ ನಡೆಸಿದರು.

ಘಟನೆಯ ಬಗ್ಗೆ ಮಾಹಿತಿ ನೀಡಿದ ಮನೆಯವರು ತಮಗೆ ನ್ಯಾಯ ನೀಡುವಂತೆ ಮನವಿ ಮಾಡಿದರು.

ಘಟನೆಯನ್ನು ಖಂಡಿಸಿದ ಸಚಿವ ಸುನಿಲ್ ಕುಮಾರ್, ಕುಟುಂಬದ ವಿರುದ್ಧ ಸುಳ್ಳು ಮೊಕದ್ದಮೆ ಹೂಡಿರುವ ವಿಷಯ ತನ್ನ ಗಮನಕ್ಕೆ ಬಂದಿದೆ. ಜಿಲ್ಲಾಧಿಕಾರಿಯನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಭರವಸೆ ನೀಡಿದರು.

ಸರಕಾರಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಾಗ ತಮ್ಮ ವ್ಯಾಪ್ತಿ ಮೀರಿ ವರ್ತಿಸಬಾರದು. ಮೊನ್ನೆಯ ಘಟನೆ ಸಮರ್ಥನೀಯವೇ ಅಲ್ಲ ಎಂದರು.

ಜಿ. ಪಂ. ಮಾಜಿ ಅಧ್ಯಕ್ಷ ದಿನಕರ ಬಾಬು ಮೊದಲಾದವರಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!