Thursday, July 7, 2022
Home ಸಮಾಚಾರ ರಾಜ್ಯ ವಾರ್ತೆ ಕೊಲ್ಲೂರು ದೇವಳ ತನಿಖೆ: ಸೂಕ್ತ ಕ್ರಮಕ್ಕೆ ಆದೇಶ

ಕೊಲ್ಲೂರು ದೇವಳ ತನಿಖೆ: ಸೂಕ್ತ ಕ್ರಮಕ್ಕೆ ಆದೇಶ

ಕುಂದಾಪುರ: ನಾಡಿನ ಪ್ರಸಿದ್ಧ ಶಕ್ತಿಕೇಂದ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ಧಾರ್ಮಿಕ ದತ್ತಿ ಇಲಾಖೆ ಉಪ ಆಯುಕ್ತರ ನೇತೃತ್ವದಲ್ಲಿ ತನಿಖೆ ನಡೆದಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದರು.

ದೇವಳದಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಬಗ್ಗೆ ದೇವಸ್ಥಾನ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ ಈಚೆಗೆ ಇಲಾಖೆಯ ಗಮನ ಸೆಳೆದಿತ್ತು.

ಕೊಲ್ಲೂರು ದೇವಸ್ಥಾನದಲ್ಲಿ ಸಾರ್ವಜನಿಕ ಕುಂದುಕೊರತೆ, ದೇವಸ್ಥಾನದ ಸ್ಥಿರ ಮತ್ತು ಚರ ಆಸ್ತಿ ನಿರ್ವಹಣೆ, ಯಾತ್ರಾರ್ಥಿಗಳ ಸೌಲಭ್ಯ, ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಇತ್ಯಾದಿ ವಿಷಯ ಕುರಿತು ಧಾರ್ಮಿಕ ದತ್ತಿ ಇಲಾಖೆ ಉಪ ಆಯುಕ್ತ ಜಯಪ್ರಕಾಶ ನೇತೃತ್ವದಲ್ಲಿ ತನಿಖೆ ನಡೆಸಿದರು.

ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಮಹೇಶ ಮತ್ತು ದೇವಸ್ಥಾನದ ಹಿರಿಯ ಅಧಿಕಾರಿಗಳು ಇದ್ದರು.

ತನಿಖೆ ಸಂದರ್ಭದಲ್ಲಿ ತಮ್ಮ ಸಂಸ್ಥೆಗೂ ಪರಿಶೀಲನೆಗೆ ಅವಕಾಶ ಕಲ್ಪಿಸಬೇಕೆಂಬ ಮಹಾಸಂಘ ಮನವಿಗೆ ಇಲಾಖೆ ಸ್ಪಂದಿಸಿದ್ದು, ದೇವಸ್ಥಾನ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ ಸದಸ್ಯರಾದ ಮಧುಸೂದನ ಅಯಾರ, ದಿನೇಶ ಎಂ. ಪಿ, ಚಂದ್ರ ಮೊಗೇರ ಮತ್ತು ಶ್ರೀನಿವಾಸ ಹಾಗೂ ಹಿಂದೂ ಜನಜಾಗೃತಿ ಸಮಿತಿ ಸಮನ್ವಯಕಾರ ವಿಜಯಕುಮಾರ, ಹಿಂದೂ ಜನಜಾಗೃತಿ ಸಮಿತಿಯ ವಿಶ್ವನಾಥ ಮತ್ತು ದಿನೇಶ ಇದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!