ಸುದ್ದಿಕಿರಣ ವರದಿ
ಮಂಗಳವಾರ, ಜನವರಿ 4, 2022
ಕೋವಿಡ್ ನಿರ್ವಹಣೆ: ಇಂದು ಸಂಜೆ ಮಹತ್ವದ ಸಭೆ
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೋವಿಡ್-19 ಹಾಗೂ ಓಮಿಕ್ರಾನ್ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಕಠಿಣ ನಿಯಂತ್ರಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ಕರೆಯಲಾಗಿದೆ.
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಂಜೆ 6.30ಕ್ಕೆ ಸಭೆ ನಿಗದಿಗೊಂಡಿದೆ.
ಸಭೆಯಲ್ಲಿ ಆರೋಗ್ಯ ಸಚಿವರು, ಕಂದಾಯ ಸಚಿವರು, ಸಾರಿಗೆ ಸಚಿವರು, ಉನ್ನತ ಶಿಕ್ಷಣ ಸಚಿವರು ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿಗಳ ಸಹಿತ ಉನ್ನತ ಮಟ್ಟದ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.