Friday, January 28, 2022
Home ಸಮಾಚಾರ ಜಿಲ್ಲಾ ಸುದ್ದಿ ಪರಿಷತ್ ಚುನಾವಣೆಯಲ್ಲಿ ಗೊಂದಲಕ್ಕೆ ಆಸ್ಪದ ನೀಡಬೇಡಿ

ಪರಿಷತ್ ಚುನಾವಣೆಯಲ್ಲಿ ಗೊಂದಲಕ್ಕೆ ಆಸ್ಪದ ನೀಡಬೇಡಿ

ಪರಿಷತ್ ಚುನಾವಣೆಯಲ್ಲಿ ಗೊಂದಲಕ್ಕೆ ಆಸ್ಪದ ನೀಡಬೇಡಿ

ಉಡುಪಿ, ನ. 24 (ಸುದ್ದಿಕಿರಣ ವರದಿ): ಜಿಲ್ಲೆಯಲ್ಲಿ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣಾ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ ಗೆ ಡಿ. 10ರಂದು ನಡೆಯುವ ಚುನಾವಣೆ ಮತದಾನ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ ಚುನಾವಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ ಹೇಳಿದರು.

ಬುಧವಾರ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಕೇಂದ್ರದಲ್ಲಿ ವಿಧಾನ ಪರಿಷತ್ ಚುನಾವಣೆ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನೀಡಲು ನಿಯೋಜಿಸಿರುವ ಮಾಸ್ಟರ್ ಟ್ರೈನಿಗಳಿಗೆ ನಡೆದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

158 ಮತಗಟ್ಟೆ
ಡಿ. 10ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಜಿಲ್ಲೆಯ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಒಟ್ಟು 158 ಮತಗಟ್ಟೆ ತೆರೆಯಲಾಗಿದ್ದು, ಈ ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುವ ಮತಗಟ್ಟೆ ಅಧಿಕಾರಿಗಳು, ಸಹಾಯಕ ಮತಗಟ್ಟೆ ಅಧಿಕಾರಿ ಹಾಗೂ ಮತಗಟ್ಟೆ ಸಿಬ್ಬಂದಿಗಳಿಗೆ ಮತದಾನ ಪ್ರಕ್ರಿಯೆಗಳ ಕುರಿತು ಸೂಕ್ತ ತರಬೇತಿ ನೀಡಬೇಕು. ಮತದಾನ ಸಂದರ್ಭದಲ್ಲಿ ಮತಗಟ್ಟೆಯಲ್ಲಿ ಅವರಿಗೆ ಯಾವುದೇ ಗೊಂದಲಗಳುಂಟಾಗದಂತೆ ವಿವರವಾದ ಮಾಹಿತಿ ನೀಡುವಂತೆ ಮಾಸ್ಟರ್ ಟ್ರೈನಿಗಳಿಗೆ ತಿಳಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಪರಸ್ಪರ ಸಮನ್ವಯದಿಂದ ಒಟ್ಟಾಗಿ, ಯಾವುದೇ ದೂರುಗಳಿಗೆ ಆಸ್ಪದ ನೀಡದ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ಮಾಸ್ಟರ್ ಟ್ರೈನರ್ ಅಶೋಕ್ ಕಾಮತ್, ಚುನಾವಣಾ ಅಧೀಕ್ಷಕಿ ಜಯಲಕ್ಷ್ಮಿ ಮತ್ತು ಸಂಪತ್ ಹಾಗೂ ಜಿಲ್ಲೆಯ 7 ತಾಲೂಕುಗಳ ಮಾಸ್ಟರ್ ಟ್ರೈನರ್ ಗಳು ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!