ಉಡುಪಿ: ವಿಶೇಷ ಶಾಲಾ ಶಿಕ್ಷಕರು ತಮಗೆ ನೀಡುತ್ತಿರುವ ಗೌರವಧನವನ್ನು ದ್ವಿಗುಣಗೊಳಿಸುವಂತೆ ಈಚೆಗೆ ಉಡುಪಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಆಪ್ತ ಸಹಾಯಕ ಪಿ. ಕೆ. ಪುರುಷೋತ್ತಮ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರರು.
ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ಧಾರ್ಮಿಕ ದತ್ತಿ ಹಾಗೂ ಬಂದರು ಮತ್ತು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರಿಗೂ ಮನವಿ ನೀಡಿದರು.
ಈ ಸಂದರ್ಭದಲ್ಲಿ ವಿಶೇಷ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷೆ ಡಾ| ಕಾಂತಿ ಹರೀಶ್, ಪ್ರಧಾನ ಕಾರ್ಯದರ್ಶಿ ಡಾ| ವಸಂತ ಕುಮಾರ್ ಶೆಟ್ಟಿ, ಗೌರವಾಧ್ಯಕ್ಷೆ ಆಗ್ನೇಸ್ ಕುಂದರ್, ಪದಾಧಿಕಾರಿಗಳಾದ ಪ್ರಭಾಕರ ಅಮ್ಮನ್ನ, ಹರೀಶ್ ಇದ್ದರು.