Saturday, August 13, 2022
Home ಸಮಾಚಾರ ರಾಜ್ಯ ವಾರ್ತೆ ಸರ್ಕಾರಿ ಕಚೇರಿಗಳಲ್ಲಿ ಚಿತ್ರೀಕರಣ ನಿಷೇಧ ಆದೇಶ ಹಿಂಪಡೆದ ಸರ್ಕಾರ

ಸರ್ಕಾರಿ ಕಚೇರಿಗಳಲ್ಲಿ ಚಿತ್ರೀಕರಣ ನಿಷೇಧ ಆದೇಶ ಹಿಂಪಡೆದ ಸರ್ಕಾರ

ಸುದ್ದಿಕಿರಣ ವರದಿ
ಶನಿವಾರ, ಜುಲೈ 16

ಸರ್ಕಾರಿ ಕಚೇರಿಗಳಲ್ಲಿ ಚಿತ್ರೀಕರಣ ನಿಷೇಧ ಆದೇಶ ಹಿಂಪಡೆದ ಸರ್ಕಾರ
ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಚಿತ್ರೀಕರಣ ನಿಷೇಧಿಸಿ ಹೊರಡಿಸಿದ್ದ ಆದೇಶವನ್ನು ಸರ್ಕಾರ ಶುಕ್ರವಾರ ತಡರಾತ್ರಿ ಹಿಂಪಡೆದಿದೆ.

ಅನುಮತಿ ಇಲ್ಲದೆ ಸಾರ್ವಜನಿಕರು ಸರ್ಕಾರಿ ಕಚೇರಿಗಳಲ್ಲಿ ಫೊಟೊಗ್ರಫಿ ಹಾಗೂ ವೀಡಿಯೊ ಚಿತ್ರೀಕರಣ ನಿಷೇಧಿಸಿತ್ತು. ಈ ಆದೇಶದ ವಿರುದ್ಧ ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ಅದರಿಂದ ಮುಜುಗರಗೊಂಡ ಸರ್ಕಾರ ರಾತ್ರೋರಾತ್ರಿ ಆದೇಶ ಹಿಂಪಡೆದುಕೊಂಡಿದೆ.

ಸರ್ಕಾರಿ ಕಚೇರಿಗಳಲ್ಲಿ ಚಿತ್ರೀಕರಣ ನಿಷೇಧ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಆದೇಶ ಜಾರಿ ಮಾಡಿದ್ದ ರಾಜ್ಯ ಸರ್ಕಾರ, ಸಾರ್ವಜನಿಕ ವಿರೋಧದ ಹಿನ್ನೆಲೆಯಲ್ಲಿ ಅಷ್ಟೇ ತರಾತುರಿಯಿಂದ ಆದೇಶ ಹಿಂಪಡೆದುಕೊಂಡಿದೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!