Sunday, July 3, 2022
Home ಸಮಾಚಾರ ಜಿಲ್ಲಾ ಸುದ್ದಿ ಚೀಟಿ ಎತ್ತುವ ಮೂಲಕ ಫಲಾನುಭವಿಗಳ ಆಯ್ಕೆ

ಚೀಟಿ ಎತ್ತುವ ಮೂಲಕ ಫಲಾನುಭವಿಗಳ ಆಯ್ಕೆ

ಉಡುಪಿ: ಸರ್ವರಿಗೂ ಸೂರು ಕಾರ್ಯಕ್ರಮದಡಿ 240 ಮನೆಗಳನ್ನು ಶಾಸಕ ರಘುಪತಿ ಭಟ್ ಉಪಸ್ಥಿತಿಯಲ್ಲಿ ಚೀಟಿ ಎತ್ತುವ ಮೂಲಕ ಹಂಚಿಕೆ ಮಾಡಲಾಯಿತು.

ಶಾಸಕ ಕೆ. ರಘುಪತಿ ಭಟ್ ಅವರ ಮಹತ್ವಾಕಾಂಕ್ಷಿ ಯೋಜನೆಯಾದ, ರಾಜ್ಯದಲ್ಲೇ ಪ್ರಪ್ರಥಮವಾಗಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಸರ್ವರಿಗೂ ಸೂರು ಕಾರ್ಯಕ್ರಮದಡಿ ಉಡುಪಿ ನಗರಸಭಾ ವ್ಯಾಪ್ತಿಯ ಫಲಾನುಭವಿಗಳಿಗೆ ಹೆರ್ಗ ಗ್ರಾಮದ ಬಬ್ಬುಸ್ವಾಮಿ ಲೇಔಟ್ ನಲ್ಲಿ ಉ+3 ಮಾದರಿಯಲ್ಲಿ ನಿರ್ಮಾಣ ಮಾಡುತ್ತಿರುವ ವಸತಿ ಸಮುಚ್ಛಯದ 460 ಮನೆಗಳ ಪೈಕಿ 240 ಮನೆಗಳನ್ನು ಚೀಟಿ ಎತ್ತುವ ಮೂಲಕ ಹಂಚಿಕೆ ಮಾಡಲಾಯಿತು.

ದಿವ್ಯಾಂಗರು ಹಾಗೂ ಹಿರಿಯ ನಾಗರಿಕರಿಗೆ ವಿಶೇಷ ನೆಲೆಯಲ್ಲಿ ನೆಲ ಮಹಡಿಯ ಮನೆಗಳನ್ನು ಚೀಟಿ ಎತ್ತುವ ಮೂಲಕ ಹಂಚಿಕೆ ಮಾಡಲಾಯಿತು.

ಶಾಸಕ ಕೆ. ರಘುಪತಿ ಭಟ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಕೊಳ, ಸ್ಥಳೀಯ ನಗರಸಭಾ ಸದಸ್ಯೆ ವಿಜಯಲಕ್ಷ್ಮಿ ಹಾಗೂ ಪೌರಾಯುಕ್ತ ಉದಯ ಶೆಟ್ಟಿ, ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರ ಪ್ರಸನ್ನ ಕುಮಾರ್, ಸಹಾಯಕ ಅಭಿಯಂತರ ಶ್ರೀಪಾದ, ಬ್ಯಾಂಕ್ ಆಫ್ ಬರೋಡಾ ರೀಜನಲ್ ಮ್ಯಾನೇಜರ್ ರವಿಕುಮಾರ್, ಭೀಮ್ ಶಂಕರ್, ಗುತ್ತಿಗೆದಾರ ನಿಹಾಲ್ ಭಟ್ ಇದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!