Monday, August 15, 2022
Home ಸಮಾಚಾರ ಜಿಲ್ಲಾ ಸುದ್ದಿ ಜಕಣಾಚಾರಿ ಸಂಸ್ಮರಣೆ ದಿನಾಚರಣೆ

ಜಕಣಾಚಾರಿ ಸಂಸ್ಮರಣೆ ದಿನಾಚರಣೆ

ಸುದ್ದಿಕಿರಣ ವರದಿ
ಶನಿವಾರ, ಜನವರಿ 1, 2022

ಜಕಣಾಚಾರಿ ಸಂಸ್ಮರಣೆ ದಿನಾಚರಣೆ

ಉಡುಪಿ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶನಿವಾರ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅವರು ಜಕಣಾಚಾರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕಿರಣ್ ಫಡ್ನೇಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಹಾಗೂ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಇದ್ದರು.

ಸಮಾಜದ ಮುಖಂಡ ಗಣೇಶ್ ಜಾಲ್ಸೂರು ಕಾರ್ಕಳ ಅವರು ಜಕಣಾಚಾರಿ ಜೀವನ ಸಾಧನೆ ಕುರಿತು ಉಪನ್ಯಾಸ ನೀಡಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!