Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಬಾಬು ಜಗಜ್ಜೀವನರಾಮ್ ಸಿದ್ಧಾಂತ ಅನುಕರಣೀಯ

ಬಾಬು ಜಗಜ್ಜೀವನರಾಮ್ ಸಿದ್ಧಾಂತ ಅನುಕರಣೀಯ

ಉಡುಪಿ: ಡಾ| ಬಾಬು ಜಗಜ್ಜೀವನರಾಮ್ ಕೇವಲ ಸ್ವಾತಂತ್ರ್ಯ ಹೋರಾಟಗಾರರು ಮಾತ್ರವಲ್ಲ, ಸಮಾಜಸೇವಕರೂ ಆಗಿದ್ದರು. ಅಂಥ ಮಹಾನ್ ವ್ಯಕ್ತಿಯ ಜೀವನ ಚರಿತ್ರೆ ಅರಿತು, ಅವರ ತತ್ವ ಸಿದ್ಧಾಂತವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರಬಾಬು ಹೇಳಿದರು.

ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪ.ಜಾತಿ ಮತ್ತು ಪ.ಪಂಗಡಗಳ ಸಂಘಟನೆ ಸಂಯುಕ್ತಾಶ್ರಯದಲ್ಲಿ ನಡೆದ ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜ್ಜೀವನರಾಮ್ ಜನ್ಮ ದಿನಾಚರಣೆಯಲ್ಲಿ ಮಾತನಾಡಿದರು.

ಬಾಬು ಜಗಜ್ಜೀವನರಾಮ್ ರಾಜಕಾರಣಿಯಾಗಿ ದೇಶವನ್ನು ಯಾವ ರೀತಿ ಮುನ್ನಡೆಸಬೇಕು ಮತ್ತು ಸಮಾಜದ ಕೆಳವರ್ಗದವರ ಸೇವೆ ಮಾಡುವ ರೀತಿಗೆ ಅತ್ಯುತ್ತಮ ಉದಾಹರಣೆಯಾಗಿದ್ದರು ಎಂದವರು ಸ್ಮರಿಸಿದರು.

ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲೆ ಡಾ| ನಿಕೇತನ ಅವರು ಡಾ| ಬಾಬು ಜಗಜ್ಜೀವನರಾಮ್ ಜೀವನ ಚರಿತ್ರೆ ಬಗ್ಗೆ ಉಪನ್ಯಾಸ ನೀಡಿದರು.

ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಜಿ. ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಜಿಲ್ಲಾಧಿಕಾರಿ ಜಿ. ಜಗದೀಶ್, ಜಿ. ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್, ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎ.ಎಸ್.ಪಿ ಕುಮಾರಚಂದ್ರ, ಜಿಲ್ಲೆಯ ಪರಿಶಿಷ್ಟ ಜಾತಿ, ಪಂಗಡ ಸಂಘಟನೆಗಳ ಪದಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಅನಿತಾ ಮಡ್ಲೂರು ಹಾಗೂ ವಿವಿಧ ಇಲಾಖಾಧಿಕಾರಿಗಳು ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!