Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಜಯನ್ ಮನೆಗೆ ಛಲವಾದಿ ಭೇಟಿ

ಜಯನ್ ಮನೆಗೆ ಛಲವಾದಿ ಭೇಟಿ

ಉಡುಪಿ: ಬಿಜೆಪಿ ಎಸ್.ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಈಚೆಗೆ ಉಡುಪಿ ಜಿಲ್ಲಾ ಪ್ರವಾಸ ಸಂದರ್ಭದಲ್ಲಿ ದಲಿತ ಚಿಂತಕ ಮತ್ತು ದಲಿತ ಸಂಘಟನೆಗಳ ನಾಯಕ ಜಯನ್ ಮಲ್ಪೆ ಮನೆಗೆ ಭೇಟಿ ನೀಡಿ ದಲಿತರ ಕುಂದು ಕೊರತೆ ಬಗ್ಗೆ ಚರ್ಚಿಸಿದರು. ಪಕ್ಷ ಸಂಘಟನೆಯಲ್ಲಿ ಕೈಜೋಡಿಸಿ ಮಾರ್ಗದರ್ಶನ ಮತ್ತು ದಲಿತ ಯುವಕರನ್ನು ಬಿಜೆಪಿಗೆ ಕರೆತರುವಲ್ಲಿ ಸಹಕಾರ ನೀಡುವಂತೆ ಮನವಿ ಮಾಡಿದರು.

ರಾಜ್ಯ ಬಿಜೆಪಿ ಎಸ್.ಸಿ ಮೋರ್ಚಾ ಕೋಶಾಧಿಕಾರಿ ನಾಗೇಶ್, ಪ್ರಧಾನ ಕಾರ್ಯದರ್ಶಿ ಹಾಗೂ ಜಿ. ಪಂ. ಅಧ್ಯಕ್ಷ ದಿನಕರಬಾಬು, ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷ ಗೋಪಾಲ ಕಳೆಂಜಿ, ಪ್ರಧಾನ ಕಾರ್ಯದರ್ಶಿ ಸದಾನಂದ ಆರ್. ಕೈಪುಂಜಾಲು, ಕೃಷ್ಣಮೂರ್ತಿ ಡಿ. ಬಿ. ಕುಂದಾಪುರ, ಅಂಬೇಡ್ಕರ್ ಯುವಸೇನೆ ಜಿಲ್ಲಾಧ್ಯಕ್ಷ ಹರೀಶ್ ಮಲ್ಪೆ ಹಾಗೂ ದಲಿತ ಸಂಘಟನೆಗಳ ಪದಾಧಿಕಾರಿಗಳು ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!